ಗುರುವಾರ , ಸೆಪ್ಟೆಂಬರ್ 16, 2021
26 °C

ಯಾರು ಮೋಸ ಮಾಡಿದ್ದಾರೆ ಎನ್ನುವುದನ್ನು ಅವರ ಬಳಿಯೇ ಕೇಳಿರಿ: ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕೆಲವು ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ’ ಎಂಬ ಗೋಕಾಕದ ಶಾಸಕ ರಮೇಶ ಜಾರಕಿಹೊಳಿ ಹೇಳಿಕೆಗೆ ಸಹೋದರ ಮತ್ತು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಇಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದರು.

‘ಯಾರಿಗೆ ಯಾರು ಮೋಸ ಮಾಡಿದ್ದಾರೆ ಎನ್ನುವುದನ್ನು ಅವರ ಬಳಿಯೇ ಕೇಳಿರಿ’ ಎಂದರು.

ಸಚಿವ ಸ್ಥಾನಕ್ಕಾಗಿ ರಮೇಶ ದೆಹಲಿಗೆ ಭೇಟಿ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ, ‘ಅದು ಅವರ ಪಕ್ಷದ ಆಂತರಿಕ ವಿಚಾರ. ನಾನೇನೂ ಹೇಳಲಿಕ್ಕೆ ಬರುವುದಿಲ್ಲ.  ಅದಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಹೇಳಿದರು.

‘ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಗೊಂದಲ ಎನ್ನುವುದು ಮುಗಿದು ಹೋಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದು 2023ರ ಮೇ ಅಂತ್ಯಕ್ಕೆ ತಿಳಿಯಲಿದೆ. ಈಗ ಚರ್ಚೆ ಮಾಡುವುದು ಅನವಶ್ಯ. ಪಕ್ಷದಲ್ಲಿ ಗೊಂದಲ ಉಂಟಾದಾಗ ಪರಿಹಾರ ಮಾಡುವುದಕ್ಕೆ ವರಿಷ್ಠರು ಇದ್ದಾರೆ. ಏನೇ ಇದ್ದರೂ ಅವರು ಗಮನಿಸುತ್ತಾರೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು