ಶುಕ್ರವಾರ, ಜೂನ್ 25, 2021
21 °C

‘ಬಿಜೆಪಿಯಿಂದ ಜಾತಿಗಳ ನಡುವೆ ಜಗಳ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ‘ಬಿಜೆಪಿಯು ದೇಶದ ಇತಿಹಾಸವನ್ನು ತಿರುಚುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ಜಾತಿ–ಜಾತಿಗಳ ಮಧ್ಯೆ ಜಗಳ ಹಚ್ಚಿ ಶಾಂತಿ ಕದಡಲು ಮುಂದಾಗಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಇಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ದೇಶಕ್ಕೆ ಸ್ವಾತಂತ್ರ್ಯ ತಂದವರು ನಿಜವಾದ ದೇಶ ಭಕ್ತರು. ಬ್ರಿಟಿಷರನ್ನು ಕ್ಷಮೆ ಕೇಳಿದವರು ದೇಶಭಕ್ತರಾಗಲು ಹೇಗೆ ಸಾಧ್ಯ?’ ಎಂದು ಕೇಳಿದರು.

‘ದೇಶ ಭಕ್ತರು ಯಾರು ಮತ್ತು ನಕಲಿ ದೇಶ ಭಕ್ತರು ಯಾರು ಎಂದು ಜನರು ತೀರ್ಮಾನಿಸುವ ಕಾಲ ಬಂದೇ ಬರುತ್ತದೆ. ಸೇವೆ ಮಾಡುವುದು ಬಿಜೆಪಿಯವರಿಗೆ ಬೇಕಾಗಿಲ್ಲ. ಕೇವಲ ಧರ್ಮ, ಜಾತಿಗಳ ನಡುವೆ ಜಗಳ ಹಚ್ಚಿ ಮತ ಕಿತ್ತಿಕೊಳ್ಳುವುದೇ ಅವರ ಉದ್ದೇಶ’ ಎಂದು ಟೀಕಿಸಿದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು