ಬೆಳಗಾವಿ: ‘ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೆ ಮೃತಪಟ್ಟ ಪ್ರವಾಸಿಗರಿಗೆ ನ್ಯಾಯ ಸಿಕ್ಕಿಲ್ಲ. ಭಾರತ– ಪಾಕಿಸ್ತಾನ ನಡುವೆ ಕದಮ ವಿರಾಮ ಹಿನ್ನೆಲೆಯಲ್ಲಿ ಯುದ್ಧ ಸ್ಥಗಿತಗೊಂಡಿದೆ. ಪೂರ್ಣಪ್ರಮಾಣದ ಯುದ್ಧ ಆಗುವುದೆಂದು ಎಲ್ಲರೂ ನಿರೀಕ್ಷಿಸಿದ್ದರು’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ಬಿಜೆಪಿಯವರೂ ಸೇರಿ ಎಲ್ಲರೂ ಯುದ್ಧ ನಿಲ್ಲಿಸಬಾರದೆಂದು ಬಯಸಿದ್ದರು. ಆದರೆ, ಕೇಂದ್ರ ಸರ್ಕಾರವು ನಿಲ್ಲಿಸಿದೆ. ಏನೂ ಮಾಡಲು ಆಗದು. 1971ರಲ್ಲಿ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರು ಪಾಕಿಸ್ತಾನವನ್ನು ಹೇಗೆ ಮಟ್ಟಹಾಕಿದ್ದರು ಎಂಬುದನ್ನು ಈಗ ಬಿಜೆಪಿಯವರೇ ಪ್ರಚಾರ ಮಾಡುತ್ತಿದ್ದಾರೆ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

‘ಅಮೆರಿಕ ಅಧ್ಯಕ್ಷ ಟ್ರಂಪ್ ಇದರಲ್ಲಿ ಏಕೆ ಮಧ್ಯಸ್ಥಿಕೆ ವಹಿಸಿದರು? ಅವರಿಗೆ ಮನವಿ ಮಾಡಿಕೊಂಡಿದ್ದು ಯಾರು ಎಂಬ ವಿಷಯ ಒಂದು ದಿನ ಹೊರಗೆ ಬರುತ್ತವೆ. ಅಲ್ಲಿಯವರೆಗೆ ನಾವು ಕಾಯಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.