ಸೋಮವಾರ, ಮೇ 23, 2022
30 °C

ಜೆಡಿಎಸ್‌ನ ಅಶೋಕ್‌ ಪೂಜಾರಿಗೆ ಆಹ್ವಾನ ನೀಡಿದ ಸತೀಶ ಜಾರಕಿಹೊಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಕಾಕ: ಕಾಂಗ್ರೆಸ್ ಸೇರ್ಪಡೆ ಆಗುವಂತೆ ಜೆಡಿಎಸ್ ಮುಖಂಡ ಆಶೋಕ ಪೂಜಾರಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಲ್ಲಿ ಮಂಗಳವಾರ ಆಹ್ವಾನ ನೀಡಿದರು.

ನಗರದ ಅಂಬಿಗೇರ ಗಲ್ಲಿಯಲ್ಲಿರುವ ಪೂಜಾರಿ ಅವರ ನಿವಾಸದಲ್ಲಿ ಮಾತುಕತೆ ನಡೆಸಿದರು. ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ, ‘ಪಕ್ಷ ಸಂಘಟನೆ ಜವಾಬ್ದಾರಿ ಕೂಡ ನನ್ನ ಮೇಲಿದೆ. ಹೀಗಾಗಿ ಇಲ್ಲಿನ ಪ್ರಮುಖರಾದ ಅಶೋಕ ಪೂಜಾರಿ, ಕೆಎಲ್‌ಇ ಸಂಸ್ಥೆ ನಿರ್ದೇಶಕ ಜಯಾನಂದ ಮುನವಳ್ಳಿ, ಮಹಾಂತೇಶ ತಾಂವಶಿ ಮೊದಲಾದವರನ್ನು ಪಕ್ಷಕ್ಕೆ ಆಹ್ವಾನಿಸಿದ್ದೇನೆ. ಪಕ್ಷ ಸಂಘಟನೆ ಹಿನ್ನೆಲೆಯಲ್ಲಿ ಅಶೋಕ ಪೂಜಾರಿ ಅವರ ನಿವಾಸಕ್ಕೆ ಭೇಟಿ ಕೊಟ್ಟಿದ್ದೆ. ಅದಕ್ಕೆ ಬೇರಾವ ಅರ್ಥ ಕಲ್ಪಿಸುವ ಅಗತ್ಯವಿಲ್ಲ’ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾ ಸಾಂಸ್ಕೃತಿಕ ಪ್ರಕೋಷ್ಠ ಸಂಚಾಲಕ ಮಹಾಂತೇಶ ತಾಂವಶಿ ಇದ್ದದ್ದು ಅಚ್ಚರಿ ಮೂಡಿಸಿತು. ಮುಖಂಡ ಶಂಕರ ಗಿಡ್ಡಿನವರ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು