ಭಾನುವಾರ, ಸೆಪ್ಟೆಂಬರ್ 19, 2021
27 °C

ಸಹೋದರನನ್ನು ಬಿಜೆಪಿಗೆ ಕಳುಹಿಸಲು ಸತೀಶಗೆ ಹೆಚ್ಚು ಆಸಕ್ತಿ: ಅರವಿಂದ ಲಿಂಬಾವಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಶಾಸಕ ರಮೇಶ ಜಾರಕಿಹೊಳಿ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಆದರೆ, ಅವರನ್ನು ಬಿಜೆಪಿಗೆ ಕಳುಹಿಸಲು ಅವರ ಸಹೋದರ, ಸಚಿವ ಸತೀಶ ಜಾರಕಿಹೊಳಿ ಅವರಿಗೆ ಹೆಚ್ಚು ಆಸಕ್ತಿ ಇದ್ದಂತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ವ್ಯಂಗ್ಯವಾಡಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಮೇಶ ಅವರು ಬಿಜೆಪಿ ಪರ ಪರೋಕ್ಷವಾಗಿ ಪ್ರಚಾರ ಮಾಡುತ್ತಿದ್ದಾರೆ’ ಎಂದರು.

‘ಮೋದಿ ಅಲೆ ಎಷ್ಟಿದೆ ಅಂದರೆ, ಕಾಂಗ್ರೆಸ್‌ ಕಾರ್ಯಕರ್ತರು ಕೂಡ ಮೋದಿ ಮೋದಿ ಎಂದು ಕೂಗುವಷ್ಟಿದೆ’ ಎಂದು ಹೇಳಿದರು.

‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಇದುವರೆಗೆ ₹ 2 ಲಕ್ಷ ಕೋಟಿ ಅನುದಾನ ನೀಡಿದೆ. ಆದರೆ, ಈ ಹಣವನ್ನು ರಾಜ್ಯ ಸರ್ಕಾರ ಸಮರ್ಪಕವಾಗಿ ಬಳಸಿಲ್ಲ. ಅನುದಾನ ಬಳಸಿರುವ ಬಗ್ಗೆ ರಾಜ್ಯ ಸರ್ಕಾರ ತಕ್ಷಣ ಶ್ವೇತ ಪತ್ರ ಹೊರಡಿಸಬೇಕು. ಇಲ್ಲದಿದ್ದರೆ ಬಿಜೆಪಿಯಿಂದ ಕರಾಳ ಪತ್ರ ಹೊರಡಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

‘‘ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ತಾವೇ ಮುಂದಿನ ಸಿ.ಎಂ ಎಂದು ಹೇಳಿರುವುದು ಕಾಂಗ್ರೆಸ್‌ನಲ್ಲಿ ನಡುಕ ಹುಟ್ಟುಹಾಕಿದೆ. ಅವರಲ್ಲಿ ಒಡಕು ಮೂಡಿಸಿದೆ’ ಎಂದು ವ್ಯಂಗ್ಯವಾಡಿದರು.

ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಝಿರಲಿ, ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಪಕ್ಷದ ಜಿಲ್ಲಾ ಉಸ್ತುವಾರಿ ಈರಣ್ಣಾ ಕಡಾಡಿ, ಯುವಮೋರ್ಚಾ ಉಪಾಧ್ಯಕ್ಷ ರಾಜು ಚಿಕ್ಕನಗೌಡ್ರ, ಬಸವರಾಜ ರೊಟ್ಟಿ ಉಪಸ್ಥಿತರಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು