ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವೂ ಬಸವಣ್ಣ, ಅಂಬೇಡ್ಕರ್‌ ಫೋಟೊ ಅಳವಡಿಸುತ್ತೇವೆ: ಸತೀಶ ಜಾರಕಿಹೊಳಿ

Last Updated 23 ಆಗಸ್ಟ್ 2022, 13:23 IST
ಅಕ್ಷರ ಗಾತ್ರ

ಬೆಳಗಾವಿ: ‘ಈ ಬಾರಿ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳ ಮಂಟಪದಲ್ಲಿ ಬಿಜೆಪಿಯವರು ಸಾವರ್ಕರ್‌ ಭಾವಚಿತ್ರ ಅಳವಡಿಸಿದರೆ, ನಾವೂ ಬಸವಣ್ಣ, ಅಂಬೇಡ್ಕರ್ ಭಾವಚಿತ್ರ ಅಳವಡಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಲ್ಲ ಜಾತಿಯವರೂ ಗಣೇಶನ ವಿಗ್ರಹ ಪ್ರತಿಷ್ಠಾಪಿಸುತ್ತಾರೆ. ಆದರೆ, ಧಾರ್ಮಿಕ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು. ಬಿಜೆಪಿಯವರು ರಾಜಕಾರಣ ಮಾಡಲು ಮುಂದಾದರೆ, ನಾವೂ ಮಾಡಬೇಕಿರುವುದು ಅನಿವಾರ್ಯ. ಹಾಗಾಗಿ ಅಂಬೇಡ್ಕರ್, ಬಸವಣ್ಣನವರ ಭಾವಚಿತ್ರ ಅಳವಡಿಸುತ್ತೇವೆ. ಕೆಲವರು ಸಂಗೊಳ್ಳಿ ರಾಯಣ್ಣ ಭಾವಚಿತ್ರ ಹಾಕಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT