ಬೆಳಗಾವಿ: ‘ಶಾಸಕ ಎಚ್.ವೈ.ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ನಿಂದ ಮೇಟಿ ಕುಟುಂಬದವರಿಗೆ ಟಿಕೆಟ್ ಕೊಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

‘ಬಾಗಲಕೋಟೆಯಲ್ಲಿ ಗೆಲ್ಲಲು ಎಲ್ಲ ತಯಾರಿ ಮುಗಿದಿದೆ. ಪಕ್ಷದ ಹೈಕಮಾಂಡ್ ಹಾಗೂ ಕುಟುಂಬದವರ ನಿರ್ಧಾರ ಆಧರಿಸಿ, ಮೇಟಿ ಕುಟುಂಬದ ಒಬ್ಬರಿಗೆ ಟಿಕೆಟ್ ನೀಡುತ್ತೇವೆ’ ಎಂದು ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ನಿಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗಲಿದೆಯೇ’ ಎಂಬ ಪ್ರಶ್ನೆಗೆ, ‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಅದು ಸಿಕ್ಕಾಗ ನೋಡೋಣ’ ಎಂದು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.