‘ಮಾರುಕಟ್ಟೆ ಸಮಸ್ಯೆಗೆ ಶೀಘ್ರ ಪರಿಹಾರ’
‘ಸರ್ಕಾರಿ ಎಪಿಎಂಸಿಗೆ ಭೇಟಿ ನೀಡಿದ್ದೇನೆ. ಇನ್ನೊಂದು ವಾರದಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸತೀಶ ಜಾರಕಿಹೊಳಿ ತಿಳಿಸಿದರು. ‘ಅವಶ್ಯಕತೆ ಬಿದ್ದರೆ ಹೊಸ ಮಳಿಗೆ ನಿರ್ಮಿಸಲು ನಾವು ತಯಾರಿದ್ದೇವೆ. ಹೀಗಾಗಿ ಯಾವುದೇ ಸಮಸ್ಯೆ ಇದ್ದರೂ ತಮ್ಮ ಗಮನಕ್ಕೆ ತರಬೇಕು’ ಎಂದರು. ಪರಿಶೀಲನೆ ವೇಳೆ ಶಾಸಕರಾದ ಆಸಿಫ್ ಸೇಠ್ ಬಾಬಾಸಾಹೇಬ ಪಾಟೀಲ್ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಉಪವಿಭಾಗಾಧಿಕಾರಿ ಶ್ರವಣ ನಾಯಿಕ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಎಪಿಎಂಸಿ ಕಾರ್ಯದರ್ಶಿ ಎಪಿಎಂಸಿ ಕಾರ್ಯದರ್ಶಿ ವಿಶ್ವನಾಥ ರೆಡ್ಡಿ ಇದ್ದರು.