ಸವದತ್ತಿ: ಜಲಸಂಪನ್ಮೂಲ ಇಲಾಖೆಯ ಸವದತ್ತಿ ವ್ಯಾಪ್ತಿಯಲ್ಲಿನ ಮಲಪ್ರಭಾ ಬಲದಂಡೆ ಕಾಲುವೆಯ ಮುಖ್ಯ ನಿಯಂತ್ರಣ ಗೇಟ್ಗಳ ಸುಮಾರು ₹ 65 ಲಕ್ಷ ಅಂದಾಜು ಮೊತ್ತದ ದುರಸ್ತಿ ಕಾಮಗಾರಿಗೆ ಬುಧವಾರ ಶಾಸಕ ವಿಶ್ವಾಸ್ ವೈದ್ಯ ಭೂಮಿಪೂಜೆ ನೆರವೇರಿಸುವದರ ಮೂಲಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ನಮ್ಮ ಭಾಗದ ರೈತರ ಜೀವನಾಡಿ ಯಾದ ಮಲಪ್ರಭಾ ಯೋಜನೆಯ ಕಾಲುವೆಗಳ ಸುಸ್ಥಿತಿ ಹಾಗೂ ಸುಧಾರಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಈ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಲುವೆಯ ಗೇಟುಗಳ ಸುಧಾ ರಣೆಯಿಂದ ನೀರಿನ ಸೋರಿಕೆಯನ್ನು ತಡೆಗಟ್ಟಿ, ಕೊನೆಯ ಹಂತದ ರೈತರ ಜಮೀನುಗಳಿಗೂ ಸಮರ್ಪಕವಾಗಿ ನೀರು ತಲುಪಿಸಿ ಅನುಕೂಲ ಕಲ್ಪಿಸಲಾಗುವದು ಎಂದರು.

ರೈತರ ಹಿತರಕ್ಷಣೆ ಮತ್ತು ನೀರಾವರಿ ಸೌಲಭ್ಯಗಳ ಬಲವರ್ಧನೆಗೆ ಸದಾ ಬದ್ಧವಿರುವದಾಗಿ ತಿಳಿಸಿದ ಅವರು ಈ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸು ವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರೈತ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-21-1792810767

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.