ಬೆಳಗಾವಿ: ‘ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ ರಾಜ್ಯ ಸಚಿವ ಸಂಪುಟವು ₹215 ಕೋಟಿಯ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸೆಪ್ಟೆಂಬರ್ 15ರೊಳಗೆ ಎಲ್ಲ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗುವುದು’ ಎಂದು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ‘ದೇವಸ್ಥಾನದಲ್ಲಿ ಮೂಲ ಸೌಲಭ್ಯ ಹಾಗೂ ಅಭಿವೃದ್ದಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ. ಜಿಲ್ಲಾಧಿಕಾರಿಯನ್ನು ಅನುಷ್ಠಾನ ಅಧಿಕಾರಿಗಳನ್ನಾಗಿ ನೇಮಿಸಿ ಅನುಮೋದನೆ ನೀಡಲಾಗಿದೆ’ ಎಂದರು.

‘₹215 ಕೋಟಿ ಅನುದಾನದ ಕಾಮಗಾರಿಗಳನ್ನು ಸರ್ಕಾರದ ಅಪೇಕ್ಷೆಯಂತೆ ಶೀಘ್ರ ಪ್ರಾರಂಭಿಸಬೇಕು. ಈ ಕುರಿತು ಟೆಂಡರ್ ಕರೆದು ಹಾಗೂ ಕಾರ್ಯಾದೇಶವನ್ನು ನೀಡುವ ಕಾರ್ಯ ಸೆ.15 ರೊಳಗಾಗಿ ಪೂರ್ಣಗೊಳಿಸಬೇಕು. 2026ರ ಡಿಸೆಂಬರ್ 25ರೊಳಗಾಗಿ ಕಾಮಗಾರಿ ಮುಗಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ’ ಎಂದರು.

‘ಯಲ್ಲಮ್ಮ ಗುಡ್ಡದಲ್ಲಿ ವಸತಿಗೃಹ, ಅತಿಥಿಗೃಹ ನಿರ್ಮಿಸಿಕೊಡಲು ಅನೇಕ ದಾನಿಗಳು ಮುಂದೆ ಬರುತ್ತಿದ್ದು, ಅವರಿಗೆ ಅಗತ್ಯ ಜಾಗ ನೀಡಲಾಗುವುದು. ಅಲ್ಲಿ ನಿರ್ಮಿಸಲಾಗುವ ಕಟ್ಟಡವು ದೇವಸ್ಥಾನಕ್ಕೆ ಸೇರಲಿದೆ. ದಾನಿಗಳ ಜತೆ ಒಡಂಬಡಿಕೆ ಮಾಡಿಕೊಂಡು ಅತಿಥಿಗೃಹ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗುವುದು. ದೇವಸ್ಥಾನದ ವತಿಯಿಂದಲೇ ವಿನ್ಯಾಸ ಒದಗಿಸಲಾಗುವುದು. ಆಗಸ್ಟ್ 26ಕ್ಕೆ ದಾನಿಗಳ ಸಭೆ ಕರೆದು ಯೋಜನೆಯನ್ನು ವಿವರಿಸಲಾಗುವುದು. ನಂತರ ಒಡಂಬಡಿಕೆ ಮಾಡಿಕೊಳ್ಳಲಾಗುವುದು’ ಎಂದು ತಿಳಿಸಿದರು.

‘ಒಟ್ಟು ವೆಚ್ಚದಲ್ಲಿ ₹97 ಕೋಟಿ ದೇವಸ್ಥಾನ ಅಭಿವೃದ್ದಿ ಮಂಡಳಿಯಿಂದ ನೀಡಲಾಗುತ್ತದೆ. ಎಸ್.ಎ.ಎಸ್.ಸಿ.ಐ. ಸಾಲ ಯೋಜನೆಯಡಿ ಕೇಂದ್ರ ಸರ್ಕಾರ ₹100 ಕೋಟಿ ಸಾಲ ಒದಗಿಸಲಿದೆ’ ಎಂದೂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಾಸಕ ವಿಶ್ವಾಸ ವೈದ್ಯ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.