ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸಭೆಯ ಸಭಾಂಗಣದಲ್ಲಿ ಸಾವರ್ಕರ್ ಭಾವಚಿತ್ರ: ಕಾಂಗ್ರೆಸ್‌ನಿಂದ ಪ್ರತಿಭಟನೆ

Last Updated 19 ಡಿಸೆಂಬರ್ 2022, 7:19 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಸುವರ್ಣಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಸಾರ್ವಕರ್ ಅವರ ಭಾವಚಿತ್ರ ಅನಾವರಣವನ್ನು ವಿರೋಧಿಸಿ ಸುವರ್ಣ ಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಅಲ್ಲದೆ, ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಬಹಿಷ್ಕರಿಸಿದರು.

ವಿಧಾನಸಭೆಯ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ, ಬಸವಣ್ಣ, ಸಂತ ಶಿಶುನಾಳ ಶರೀಫ, ಕನಕದಾಸ, ನಾರಾಯಣಗುರು, ಅಂಬೇಡ್ಕರ್, ನೆಹರೂ, ಜಗಜೀವನ ರಾಮ್, ಸರದಾರ ವಲ್ಲಭಬಾಯ್ ಪಟೇಲ್, ಕುವೆಂಪು ಮತ್ತಿತರ ಮಹನೀಯರ ಭಾವಚಿತ್ರ ಹಾಕಬೇಕೆಂದು ಒತ್ತಾಯಿಸಿದರು.

ಈ ಮಹನೀಯರ ಭಿತ್ತಿಚಿತ್ರಗಳನ್ನು ಹಿಡಿದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸತೀಶ್ ಜಾರಕಿಹೊಳಿ, ಮುಖಂಡರಾದ ಎಚ್. ಕೆ. ಪಾಟೀಲ, ಕೆ. ಜೆ. ಜಾರ್ಜ್, ಆರ್. ವಿ. ದೇಶಪಾಂಡೆ, ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಸುವರ್ಣಸೌಧದ ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ನಡೆಸಿದರು.

ಒಳ್ಳೆಯ ರೀತಿ ಚರ್ಚೆ ಆಗಬೇಕು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, 'ಬೆಳಗಾವಿಯಲ್ಲಿ ಅಧಿವೇಶನ ಆರಂಭ ಆಗುತ್ತಿದೆ. ಈ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು. ಅವುಗಳಿಗೆ ಪರಿಹಾರ ಕೊಡಬೇಕು. ಕಲಾಪದಲ್ಲಿ ಕೆಲವು ಕಾನೂನಗಳು ಆಗಬೇಕು.‌ಎಲ್ಲರ ಸಹಕಾರದೊಂದಿಗೆ ಒಳ್ಳೆಯ ರೀತಿ ಚರ್ಚೆ ಆಗಬೇಕು' ಎಂದರು

ವಿಧಾನಸಭಾಂಗಣದಲ್ಲಿ ಸಾವರ್ಕರ್ ಭಾವಚಿತ್ರ ಅಳವಡಿಸಿದ ಬಗ್ಗೆ ಅವರು, 'ಅದರ ಬಗ್ಗೆ ನನಗೆ ಗೊತ್ತಿಲ್ಲ, ಇದು ಸಭಾಧ್ಯಕ್ಷರಿಗೆ ಬಿಟ್ಟ ವಿಷಯ' ಎಂದರು‌.

ಎಲ್ಲ ಮಹನೀಯರ ಫೋಟೋ ಹಾಕುವಂತೆ ಸಿದ್ದರಾಮಯ್ಯ ನೀಡಿದ ಸಲಹೆಗೆ, ಅವರ ಜೊತೆ ಮಾತನಾಡುತ್ತೇನೆ ಎಂದರು.

ಪಂಚಮಸಾಲಿ ಮೀಸಲಾತಿ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, 'ಪಂಚಮಸಾಲಿ ಮೀಸಲಾತಿ ನೀಡುವ ಬಗ್ಗೆ ಗಡುವು ನಾನೇನು ಕೊಟ್ಟಿಲ್ಲ. ಹಿಂದುಳಿದ ಆಯೋಗದ ಅಧ್ಯಕ್ಷರಿಗೆ ವರದಿ ಕೊಡಲು ಹೇಳಿದ್ದೇನೆ. ಅಧಿವೇಶನ ಆರಂಭವಾಗುವ ಮುನ್ನ ವರದಿ ಕೊಡಲು ಹೇಳಿದ್ದೆ' ಎಂದರು.

'ಆಯೋಗ ಒಂದು ಸ್ವಾಯತ್ತ ಸಂಸ್ಥೆ. ಆಯೋಗದವರು ಇನ್ನೂ ವರದಿ ಕೊಟ್ಟಿಲ್ಲ, ಅತಿ ಶ್ರೀಘ್ರದಲ್ಲಿ ಅವರು ವರದಿ ಕೊಡುವ ವಿಶ್ವಾಸವಿದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT