ಬೆಳಗಾವಿ: ‘ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಿಸಲಿ’:ಪ್ರೊ.ನಿರ್ಮಲಾ ಬಟ್ಟಲ್

ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್‌ಆರ್‌ಎಸ್ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ ಬಟ್ಟಲ್ ಹೇಳಿದರು.
ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಗಜಾನನ ಕಾಶೀದ್, ಉಪಾಧ್ಯಕ್ಷೆ ನೀಲಮ್ಮ ಟಿಪ್ಪುಪುಡೆ ಹಾಜರಿದ್ದರು.
ಇದಕ್ಕೂ ಮುನ್ನ, ಕೋಟೆ ಕೆರೆ ಬಳಿ ಇರುವ ಅಶೋಕ ವೃತ್ತದಿಂದ ರಂಗಮಂದಿರದವರೆಗೆ ನಡೆದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.