ಸವದತ್ತಿ: ‘ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜನಪರ ಯೋಜನೆಗಳು ಹಾಗೂ ಕ್ಷೇತ್ರದ ಅಭಿವೃದ್ಧಿ ಆಧರಿಸಿ ಬಿಜೆಪಿಯ ನೂರಾರು ಮುಖಂಡರು ಮತ್ತು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕಾಂಗ್ರೆಸ್ಸಿನ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರಿದ್ದು ಆನೆ ಬಲ ಬಂದಂತಾಗಿದೆ’ ಎಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು.

ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಉದ್ದೇಶಿಸಿ ಭಾನುವಾರ ಮಾತನಾಡಿ, ‘ಸಿದ್ದರಾಮಯ್ಯ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ನ ಗತವೈಭವ ಮರುಕಳಿಸಿದೆ’ ಎಂದರು.

‘ರಾಜ್ಯ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ವಿರೋಧ ಪಕ್ಷ ಕುಗ್ಗುತ್ತಿದೆ. ಹಾಗಾಗಿ ಸಾಮೂಹಿಕವಾಗಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ಅಪ್ಪಿಕೊಂಡಿದ್ದಾರೆ’ ಎಂದರು.

ಮಾಜಿ ಶಾಸಕ ಆರ್.ವಿ. ಪಾಟೀಲ ಮಾತನಾಡಿ, ‘ಸವದತ್ತಿ ಕ್ಷೇತ್ರ ಆರಂಭದಿಂದಲೂ ಕಾಂಗ್ರೆಸ್ ಭದ್ರಕೋಟೆ. ಜೊತೆಗೆ ಶಾಸಕರ ಅಭಿವೃದ್ಧಿ ಕಾರ್ಯಗಳು ಪಕ್ಷಕ್ಕೆ ಇನ್ನಷ್ಟು ಬಲ ತಂದಿದೆ. ಮುಂಬರುವ ಚುನಾವಣೆಗಳಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರಲಿದೆ’ ಎಂದರು.

ಶಂಕರ ಇಟ್ನಾಳ, ಪ್ರಕಾಶ ವಾಲಿ, ಫಕ್ಕಿರಪ್ಪ ಹದ್ದನ್ನವರ, ಸಂತೋಶ ನೊರೆಯವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-21-1663093993

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.