ಸವದತ್ತಿ: ಇಲ್ಲಿನ ರಾಘವೇಂದ್ರ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಕಟ್ಟಡ ಕಾಮಗಾರಿಗೆ ಶಾಸಕ ವಿಶ್ವಾಸ್ ವೈದ್ಯ ಮಂಗಳವಾರ ಭೂಮಿ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಶಿರಸಂಗಿ ಸರ್ಕಾರಿ ಶಾಲಾ ಆವರಣದಲ್ಲಿ 17.70 ಲಕ್ಷ ವೆಚ್ಚದ ನೂತನ ಕೊಠಡಿ ಹಾಗೂ ವಿವಿಧ ಸೌಲಭ್ಯಗಳನ್ನು ಉದ್ಘಾಟಿಸಲಾಗಿದೆ. ಜೊತೆಗೆ ಶಿರಸಂಗಿ ಗ್ರಾಮದ ಹೊಸೂರ ಬೀರಲಿಂಗೇಶ್ವರ ದೇವಸ್ಥಾನದ ಹತ್ತಿರ ಮೂಲಸೌಲಭ್ಯಗಳನ್ನು ಕಲ್ಪಿಸಲು ₹50 ಲಕ್ಷ ಅನುದಾನ ನೀಡಲಾಗಿದೆ ಎಂದರು

ಯಡ್ರಾಂವಿ ಗ್ರಾಮದಿಂದ ಶಿರೂರುವರೆಗೆ ರಸ್ತೆ ಸುಧಾರಣೆಗೆ ₹1.85 ಕೋಟಿ ಮತ್ತು ಚುಳಕಿಯಿಂದ ಮನಿಕಟ್ಟಿವರೆಗೆ ರಸ್ತೆ ಅಭಿವೃದ್ಧಿಗೆ ₹4.95 ಕೋಟಿ ವೆಚ್ಚದ ಕಾಮಗಾರಿ ಆರಂಭಿಸಲಾಗಿದೆ ಎಂದರು.

ತಹಶೀಲ್ದಾರ್ ಎಂ.ಎನ್.ಹೆಗ್ಗನ್ನವರ, ಆರ್.ಎಸ್.ಕದಂ, ಜಗದೀಶ ಶಿರಸಂಗಿ, ಎಂ.ಕೆ.ಬೇವೂರ, ಗದಿಗೆಪ್ಪ ಕುರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-21-181969448

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.