ಭಾನುವಾರ, ಮೇ 9, 2021
22 °C

‘ಜನಸಾಮಾನ್ಯ ರಕ್ಷಣೆ: ಸರ್ಕಾರ ವಿಫಲವಾಗಿದೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೊರೊನಾ ಸೋಂಕು ದೇಶದಾದ್ಯಂತ ವ್ಯಾಪಿಸಿದೆ. ಇದನ್ನು ನಿಯಂತ್ರಿಸಿ, ಜನಸಾಮಾನ್ಯರನ್ನು ರಕ್ಷಿಸುವಲ್ಲಿ ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದರು.

ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸೋಮವಾರ ಮಾತನಾಡಿದ ಅವರು, ‘ಸೋಂಕಿತರ ಪರೀಕ್ಷಾ ವರದಿ, ಸಂಪರ್ಕಿತರ ಪತ್ತೆ ಹಾಗೂ ಲಸಿಕೆ ವಿತರಣೆವರೆಗೂ ಸರ್ಕಾರವು ಎಡವಿದೆ. ಎಚ್ಚೆತ್ತುಕೊಂಡು ಲಸಿಕೆ ನೀಡುವ ಕೆಲಸ ಮಾಡಬೇಕು. ಇದ್ಯಾವುದೇ ಹಂತದಲ್ಲಿ ಸರ್ಕಾರ ಜನರಪರ ಕಾಳಜಿ ವಹಿಸುತ್ತಿಲ್ಲ. ರಾಜ್ಯದಲ್ಲಿ 20ರಿಂದ 35 ವಯೋಮಾನವರಿಗೆ ಸೋಂಕು ತಗುಲುತ್ತಿದೆ. ಆದರೆ, ಸರ್ಕಾರ ಮಾತ್ರ 45 ವರ್ಷಕ್ಕೂ ಮೇಲ್ಪಟ್ಟವರಿಗೆ ಮಾತ್ರ ಈ ಲಸಿಕೆ ನೀಡುತ್ತಿದೆ. ಕಳೆದ 15 ದಿನಗಳಲ್ಲಿ ಬಹಳಷ್ಟು ಯುವಕರು ಸೋಂಕಿಗೆ ಬಲಿಯಾಗಿದ್ದಾರೆ. ಆದರೂ ಆಡಳಿತ ವ್ಯವಸ್ಥೆ ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಟೀಕಿಸಿದರು.

‘ಚಾಮರಾಜನಗರದಲ್ಲಿ ಆಮ್ಲಜನಕ ಕೊರತೆಯಿಂದ ನಡೆದ ದುರಂತವು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದ ಸಾಲು-ಸಾಲು ಸಾವುಗಳಾಗುತ್ತಿವೆ. ಬಡಪಾಯಿಗಳ ಸ್ಥಿತಿ ಏನು?’ ಎಂದು ಕೇಳಿದರು.

‘ಜನರ ಕಣ್ಣಿಗೆ ಮಣ್ಣೆರಚಲು ಕಾಟಾಚಾರಕ್ಕೆ ಅವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವ ಬದಲಿಗೆ, ಲಸಿಕೆ ನೀಡುವತ್ತ ಗಮನಹರಿಸಬೇಕು’ ಎಂದು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು