ಬುಧವಾರ, ಮಾರ್ಚ್ 29, 2023
32 °C

ಸವಿತಾಗೆ 2 ಚಿನ್ನದ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಶ್ರೀನಗರದ ನಿವಾಸಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಶಿಕ್ಷಣಾರ್ಥಿಯಾಗಿರುವ ಸವಿತಾ ಬಸವರಾಜ ಪಾಟೀಲ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ 2 ಚಿನ್ನದ ಪದಕಗಳನ್ನು ಪಡೆದುಕೊಂಡಿದ್ದಾರೆ.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯುನ್ಮಾನ ಮಾಧ್ಯಮ (ಎಲೆಕ್ಟ್ರಾನಿಕ್ ಮೀಡಿಯಾ) ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಸಾಧನೆ ತೋರಿದ್ದಾರೆ. ಈಚೆಗೆ ನಡೆದ 71ನೇ ಘಟಿಕೋತ್ಸವದಲ್ಲಿ ಪದಕ ಪ್ರದಾನ ಮಾಡಲಾಗಿದೆ. ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು