ಮಂಗಳವಾರ, ಜನವರಿ 28, 2020
19 °C
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ;

ಜನರ ಅಭಿಪ್ರಾಯ ಸಂಗ್ರಹ 10ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗವು ಇದೇ 10ರಂದು ಇಲ್ಲಿನ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಜನರ ಅಭಿಪ್ರಾಯ ಆಲಿಸಲಿದೆ.

ಅಂದು ಬೆಳಿಗ್ಗೆ 10.30ಕ್ಕೆ ಸಭೆ ಆರಂಭಗೊಳ್ಳಲಿದೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ (ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆ) ಸಾರ್ವಜನಿಕರು ಈ ಸಮಾವೇಶದಲ್ಲಿ ಭಾಗವಹಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಮನವಿ ಸಲ್ಲಿಸಬಹುದು.

ಮೌಖಿಕವಾಗಿ ಮನವಿ ಮಂಡಿಸುವವರು ತಮ್ಮ ಹೆಸರನ್ನು ಕಾರ್ಯಕ್ರಮದ ಮುಂಚೆಯೇ ನಿಗಿದಿಪಡಿಸಿದ ಕೌಂಟರ್‌ಗಳಲ್ಲಿ ನೋಂದಾಯಿಸಿಕೊಂಡಿರಬೇಕು. ಹೆಸರನ್ನು ನೋಂದಾಯಿಸಿಕೊಂಡವರಿಗೆ ಮಾತ್ರ ಸಮಾವೇಶದಲ್ಲಿ ತಮ್ಮ ಅಭಿಪ್ರಾಯವನ್ನು ತಿಳಿಸಲು ಅವಕಾಶವಿರುತ್ತದೆ.

ಇದನ್ನು ಜಿಲ್ಲಾವಾರು ನೋಂದಾಯಿಸಲಾಗುತ್ತದೆ. ಲಿಖಿತ ರೂಪದಲ್ಲಿ ಸಲ್ಲಿಸುವವರು ಸಮಾವೇಶದ ಸಮಯದಲ್ಲಿ ಸಂಬಂಧಿಸಿದ ಅಧಿಕಾರಿಗೆ ಸಲ್ಲಿಸಬಹುದಾಗಿದೆ. ಮೌಖಿಕವಾಗಿ ವಿಚಾರ ಮಂಡಿಸುವವರು ತಮ್ಮ ಅಭಿಪ್ರಾಯವನ್ನು ವಿಷಯಕ್ಕೆ ಸೀಮಿತ ಮಾಡಿಕೊಂಡು ಸಂಕ್ಷಿಪ್ತವಾಗಿ ತಮ್ಮ ಅಭಿಪ್ರಾಯ ಮಂಡಿಸಬಹುದಾಗಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು