ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಷ್ಯವೇತನ ಯೋಜನೆಗೆ ಚಾಲನೆ ಸೆ.5ರಂದು

Last Updated 4 ಸೆಪ್ಟೆಂಬರ್ 2021, 4:05 IST
ಅಕ್ಷರ ಗಾತ್ರ

ಬೆಳಗಾವಿ: ‘ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ಶಿಷ್ಯವೇತನ ಯೋಜನೆ’ಯನ್ನು ಸರ್ಕಾರ ಜಾರಿಗೆ ತಂದಿದ್ದು, ಸೆ.5ರಂದು ಬೆಳಿಗ್ಗೆ 9.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದಲ್ಲಿ ಚಾಲನೆ ನೀಡಲಿದ್ದಾರೆ. ಜಿಲ್ಲೆಯ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ನೇರಪ್ರಸಾರದಲ್ಲಿ ಕಾರ್ಯಕ್ರಮ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಪಿಯುಸಿ, ಐಟಿಐ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹ 2ಸಾವಿರ, ವಿದ್ಯಾರ್ಥಿನಿಯರಿಗೆ ₹ 3ಸಾವಿರ ಹಾಗೂ ಎಂ.ಬಿ.ಬಿ.ಎಸ್., ಬಿ.ಇ., ಬಿ.ಟೆಕ್. ಮತ್ತು ವೃತ್ತಿಪರ ಕೋರ್ಸ್‌ಗಳನ್ನು ಹೊರತುಪಡಿಸಿ ಎಲ್ಲ ವಿದ್ಯಾರ್ಥಿಗಳಿಗೆ ₹ 5ಸಾವಿರ, ವಿದ್ಯಾರ್ಥಿನಿಯರಿಗೆ ₹ 5,500, ಎಲ್.ಎಲ್.ಬಿ., ಪ್ಯಾರಾ ಮೆಡಿಕಲ್, ಬಿ.ಫಾರ್ಮ, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್‌ಗಳ ವಿದ್ಯಾರ್ಥಿಗಳಿಗೆ ₹ 7,500 ಮತ್ತು ವಿದ್ಯಾರ್ಥಿನಿಯರಿಗೆ ₹ 8ಸಾವಿರ, ಎಂ.ಬಿ.ಬಿ.ಎಸ್, ಬಿ.ಇ, ಬಿ.ಟೆಕ್ ಮತ್ತು ಎಲ್ಲ ಸ್ನಾತಕೋತ್ತರ ಕೋರ್ಸ್‌ ವಿದ್ಯಾರ್ಥಿಗಳಿಗೆ ₹ 10ಸಾವಿರ ಮತ್ತು ವಿದ್ಯಾರ್ಥಿನಿಯರಿಗೆ ₹ 11ಸಾವಿರವನ್ನು (ವಾರ್ಷಿಕ) ಕೊಡಲಾಗುತ್ತದೆ’ ಎಂದು ವಿವರಿಸಿದ್ದಾರೆ.

‘ಹೆಚ್ಚಿನ ಮಾಹಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT