ಮಂಗಳವಾರ, ಮಾರ್ಚ್ 28, 2023
29 °C

₹ 80 ಲಕ್ಷ ವೆಚ್ಚದಲ್ಲಿ ಶಾಲಾ ಕೊಠಡಿಗಳ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಗ್ರಾಮೀಣ ಕ್ಷೇತ್ರದಲ್ಲಿ ₹ 80 ಲಕ್ಷ ವೆಚ್ಚದಲ್ಲಿ ವಿವಿಧ ಶಾಲೆಗಳಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.

ನಬಾರ್ಡ್ ಅನುದಾನದಲ್ಲಿ ಗೋಜಗಾ ಗ್ರಾಮದ ಮರಾಠಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 5, ಬೆಕ್ಕಿನಕೇರಿ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಗೆ ಒಂದು, ತುರಮರಿಯ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಒಂದು ಕೊಠಡಿ ನಿರ್ಮಾಣಕ್ಕೆ ಚಾಲನೆ ನೀಡಿದರು.

‘ಕ್ಷೇತ್ರದ ಯಾವುದೇ ಭಾಗಕ್ಕೂ ಅನ್ಯಾಯವಾಗದಂತೆ ಕೆಲಸ ನಿರ್ವಹಿಸುತ್ತಿದ್ದೇನೆ. ಜನರು ಈಗ ನಿಜವಾದ ಅಭಿವೃದ್ಧಿ ಕಾಣುವಂತೆ ಮಾಡಿದ್ದೇನೆ. ಪ್ರವಾಹ, ಕೊರೊನಾ ಸಂಕಷ್ಟದ ಮಧ್ಯೆಯೂ ಎಡೆಬಿಡದೆ ಕೆಲಸ ನಿರ್ವಹಿಸಲು ಜನರು ಸಹಕಾರ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ಸಹಕಾರವಿದ್ದರೆ ಕ್ಷೇತ್ರವನ್ನು ಅತ್ಯಂತ ಬೇಗ ಮಾದರಿ ಮಾಡಲು ಸಾಧ್ಯ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಅರುಣ ಕಟಾಂಬಳೆ, ಸದಸ್ಯೆ ಸರಸ್ವತಿ ಪಾಟೀಲ, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ, ಶಿಕ್ಷಣ ಇಲಾಖೆ ಅಧಿಕಾರಿಗಳು, ಎಸ್‌ಡಿಎಂಸಿಯವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು