ಶನಿವಾರ, ಜನವರಿ 29, 2022
26 °C

ಬೆಳಗಾವಿ ಜಿಲ್ಲೆಯಲ್ಲಿ ಜ.17ರಿಂದ ಶಾಲೆ ಆರಂಭ: ಜಿಲ್ಲಾಧಿಕಾರಿ ಹಿರೇಮಠ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯಾದ್ಯಂತ 1ರಿಂದ 9ನೇ ತರಗತಿಯವರೆಗಿನ ಶಾಲೆಗಳನ್ನು ಜ.17ರಿಂದ ಪುನರಾರಂಭಿಸುವಂತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಬುಧವಾರ ಆದೇಶ ಹೊರಡಿಸಿದ್ದಾರೆ.

‘ಜಿಲ್ಲೆಯಲ್ಲಿ ಕೊರೊನಾ ವೈರಾಣು ಹರಡುವಿಕೆ ತಡೆಯುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾಧ್ಯಮದ ಶಾಲೆಗಳನ್ನು ಜ.19ವರೆಗೆ ತೆರೆಯದಂತೆ ಆದೇಶಿಸಲಾಗಿತ್ತು. ಬುಧವಾರ ನಡೆದ ವಿಡಿಯೊ ಸಂವಾದದಲ್ಲಿ ಶಿಕ್ಷಣ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿ ನೀಡಿದ ನಿರ್ದೇಶನದ ಅನ್ವಯ ಆದೇಶವನ್ನು ಪರಿಷ್ಕರಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಕೊರೊನಾ ವೈರಾಣು ಹರಡುವಿಕೆ ಪ್ರಮಾಣವು ಉಲ್ಬಣಗೊಳ್ಳುತ್ತಿರುವ ಕಿತ್ತೂರು ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ಸೈನಿಕ ವಸತಿ ಶಾಲೆಯನ್ನು ಮುಂದಿನ ಆದೇಶದವರೆಗೆ ಮುಂಜಾಗ್ರತಾ ಕ್ರಮವಾಗಿ ತೆರೆಯದಂತೆ ಆದೇಶ ಹೊರಡಿಸಲಾಗಿದೆ. ಉಳಿದಂತೆ ಎಲ್ಲ ಶಾಲಾ–ಕಾಲೇಜುಗಳನ್ನು ಮಾರ್ಗಸೂಚಿಗಳ ಅನ್ವಯ ಪುನರಾರಂಭಿಸಬೇಕು’ ಎಂದು ಆದೇಶಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು