ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವಾದಾತ್ಮಕ ಹೇಳಿಕೆ ನೀಡಿದವರನ್ನು ಬಂಧಿಸಿ: ಎಸ್‌ಡಿಪಿಐ

Last Updated 10 ಜೂನ್ 2022, 9:55 IST
ಅಕ್ಷರ ಗಾತ್ರ

ಬೆಳಗಾವಿ: ‘ಪ್ರವಾದಿ ಮಹಮ್ಮದ್‌ ಪೈಗಂಬರ್‌ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್‌ ಶರ್ಮಾ ಅವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿ ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ(ಎಸ್‌ಡಿಪಿಐ) ಜಿಲ್ಲಾ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಬಳಿಕ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

‘ಪ್ರವಾದಿ ಮಹಮ್ಮದ್‌ ಪೈಗಂಬರ್‌ ಇಸ್ಲಾಂ ಧರ್ಮದ ಬೆಳವಣಿಗೆಗೆ ಶ್ರಮಿಸಿದ್ದಾರೆ. ಮನುಕುಲದ ಒಳಿತಿಗೆ ದುಡಿದಿದ್ದಾರೆ. ಅಂತಹವರ ಬಗ್ಗೆ ನೂಪುರ್‌ ಶರ್ಮಾ ವಿವಾದಾತ್ಮಕ ಹೇಳಿಕೆ ಕೊಟ್ಟಿರುವುದು ಸರಿಯಲ್ಲ’ ಎಂದು ದೂರಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಘಟಕದ ಅಧ್ಯಕ್ಷ ಅಬೀದ್ ಖಾನ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT