ಬುಧವಾರ, ಮೇ 18, 2022
27 °C

ಬೆಳಗಾವಿ | ಬಿಜೆಪಿ ಸರ್ಕಾರದಿಂದ ಅರಾಜಕತೆ ಸೃಷ್ಟಿ: ಎಸ್‌ಡಿಪಿಐ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ’ ಎಂದು ಆರೋಪಿಸಿ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಕಾರ್ಯಕರ್ತರು ಇಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ಹಲಾಲ್ ಕಟ್ ಮಾಂಸ ಬಹಿಷ್ಕರಿಸುವಂತೆ ಕೆಲವರು ಪ್ರಚಾರ ನಡೆಸುತ್ತಿದ್ದರೂ ಸರ್ಕಾರ ಸುಮ್ಮನಿದೆ. ಮೈಸೂರಿ ಹುಲಿ ಟಿಪ್ಪು ಸುಲ್ತಾನ್ ಪಾಠವನ್ನು ಪಠ್ಯಕ್ರಮದಿಂದ ತೆಗೆಯುವಂಥಹ ನಿರ್ಧಾರವನ್ನು ತೆಗೆದುಕೊಂಡಿದೆ. ಇದು ಸರಿಯಲ್ಲ’ ಎಂದು ತಿಳಿಸಿದರು.

‘ಹಲಾಲ್ ಕಟ್ ಹಿಂದೆ ವೈಜ್ಞಾನಿಕ ಕಾರಣವಿದೆ. ಈ ಬಗ್ಗೆ ಸರ್ಕಾರ ಗಮನಿಸಬೇಕು. ಒಂದು ಸಮುದಾಯವನ್ನು ಗುರಿ ಮಾಡುವುದಕ್ಕೆ ಕಡಿವಾಣ ಹಾಕಬೇಕು’ ಎಂದರು.

‘ಮಕ್ಕಳ ಮನಸ್ಸಿನಲ್ಲಿ ವಿಷ ಬಿತ್ತುವ ಶಿಕ್ಷಣ ನೀತಿಗಳನ್ನು ಕೈಬಿಡಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು