ಸೋಮವಾರ, ಏಪ್ರಿಲ್ 19, 2021
23 °C

ಬಿಜೆಪಿ ಸಮಾವೇಶ: ನಗರದಲ್ಲಿ ಪೊಲೀಸ್ ಬಂದೋಬಸ್ತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಗರದಲ್ಲಿ ಜ. 17ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಬಿಜೆಪಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯಮಂತ್ರಿ, ಸಂಸದರು, ಸಚಿವರು, ಶಾಸಕರು ಮತ್ತು ಗಣ್ಯರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬಂದೋಬಸ್ತ್‌ ಮಾಡಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಿಳಿಸಿದ್ದಾರೆ.

‘ಕರ್ತವ್ಯಕ್ಕೆಂದು ರಾಜ್ಯದ ವಿವಿಧ ಜಿಲ್ಲೆ ಹಾಗೂ ವಿವಿಧ ವಿಶೇಷ ಘಟಕಗಳಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಆಗಮಿಸಿದ್ದಾರೆ. ಪೊಲೀಸ್ ಆಯುಕ್ತ, 15 ಎಸ್ಪಿ, 53 ಡಿಎಎಸ್ಪಿ, 118 ಸಿಪಿಐ/ಪಿಐ, 235-ಪಿಎಸ್‌ಐ, 350–ಎಎಸ್‌ಐ ಮತ್ತು 2,380- ಎಚ್‌ಸಿ /ಪಿಸಿ ಹಾಗೂ ವಿಶೇಷ ಘಟಕಗಳಾದ ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್-16, ಎಎಸ್‌ಸಿ-10, ಸಿಆರ್‌ಪಿಎಫ್, ಬಿಡಿಡಿಎಸ್, ಎಫ್‌ಪಿಬಿ, ಸಿಐಡಿ, ರಾಜ್ಯಗುಪ್ತ ವಾರ್ತೆ, ಇಂಟರ್ನಲ್‌ ಸೆಕ್ಯುರಿಟಿ ಘಟಕದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

‘ಅಂದು ಬೆಳಿಗ್ಗೆಯಿಂದ ಕಾರ್ಯಕ್ರಮ ಮುಕ್ತಾಯವಾಗುವವರೆಗೆ, ಎಲ್ಲ ಮಾದರಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕು’ ಎಂದು ಕೋರಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು