ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡಿಕೇರಿ: ಬಿತ್ತನೆ ಬೀಜ ವಿತರಣೆಗೆ ಚಾಲನೆ

Last Updated 14 ಅಕ್ಟೋಬರ್ 2020, 16:03 IST
ಅಕ್ಷರ ಗಾತ್ರ

ಉಡಿಕೇರಿ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಹಿಂಗಾರು ಹಂಗಾಮಿಗೆ ಬಿತ್ತನೆ ಬೀಜ ವಿತರಿಸುವ ಕಾರ್ಯಕ್ಕೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ ಮತ್ತು ಅಧ್ಯಕ್ಷ ಮಲ್ಲಿಕಾರ್ಜುನ ಗೂಳಪ್ಪನವರ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ‘ಸರ್ಕಾರದಿಂದ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ನೀಡಲಾಗುತ್ತಿದೆ. ಕೃಷಿಕರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಮುಂಗಾರು ಹಂಗಾಮಿನ ಬೆಳೆಗಳು ಮಳೆಯಿಂದಾಗಿ ಹಾಳಾಗಿದ್ದು, ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಾವೂ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದರು.

ಕೃಷಿ ಇಲಾಖೆ ಉಪನಿರ್ದೇಶಕ ಎಚ್.ಡಿ. ಕೋಳೆಕರ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಸಹಾಯಕ ನಿರ್ದೇಶಕಿ ಪ್ರತಿಭಾ ಹೂಗಾರ, ಗ್ರಾಮ ಲೆಕ್ಕಾಧಿಕಾರಿ ದೀಪಕ ಕೌಜಲಗಿ, ಸಂಘದ ಉಪಾಧ್ಯಕ್ಷ ರುದ್ರಪ್ಪ ಗೌಡಪ್ಪ, ಲಾಲ್‌ಸಾಬ್‌ ತಡಕೋಡ, ಸದಸ್ಯರಾದ ಸೋಮಯ್ಯ ಸುತಗಟ್ಟಿ, ಈರಪ್ಪ ಕುರಿ, ಈರಪ್ಪ ಮಡಿವಾಳರ, ಬಸಪ್ಪ ಅಬ್ಬಾರ, ರಾಮಲಿಂಗಪ್ಪ ಕೋಟಗಿ, ಉಮೇಶ ಹಿತ್ತಲಮನಿ, ಮಹಾದೇವ ಹಲಕಿ, ವೀರಭದ್ರಪ್ಪ ಮಾದರ, ಶಿವಲಿಂಗವ್ವ ಪರವನ್ನವರ, ಭಾರತಿ ಗುರುಪುತ್ರನವರ, ಕಾರ್ಯದರ್ಶಿ ಆನಂದ ಹಲಕಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT