ಮಂಗಳವಾರ, ಜೂನ್ 28, 2022
23 °C

ಖಾನಾಪುರ: ಭತ್ತದ ಬೀಜ ವಿತರಣೆಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಖಾನಾಪುರ: ತಾಲ್ಲೂಕಿನ ನಿಟ್ಟೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ರಿಯಾಯಿತಿ ದರದಲ್ಲಿ ಪ್ರಮಾಣೀಕೃತ ಭತ್ತದ ಬೀಜ ವಿತರಣೆಗೆ ಶುಕ್ರವಾರ ಚಾಲನೆ ನೀಡಲಾಯಿತು.

ಸಂಘದ ಅಧ್ಯಕ್ಷ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಸುರೇಶ ದೇಸಾಯಿ ರೈತರಿಗೆ ಬೀಜ ವಿತರಿಸಿ ಮಾತನಾಡಿ, ರೈತರು ಕಳಪೆ ಬೀಜಗಳನ್ನು ಖರೀದಿಸಿ ಮೋಸ ಹೋಗಬಾರದು. ಭತ್ತದ ಬೀಜ ಖರೀದಿಸಿದ ಬಳಿಕ ರಸೀದಿ ಪಡೆದು ಕಾಯ್ದಿಟ್ಟುಕೊಳ್ಳಬೇಕು. ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಪ್ರಯೋಜನ ಪಡೆಯಬೇಕು ಎಂದರು. ಲಕ್ಷ್ಮಣ ನಾಯ್ಕ, ಸಾಗರ ನಾರ್ವೇಕರ, ನಾಮದೇವ ಸುಳೇಬಾವಿ, ಗುಂಡು ಚೌಗುಲೆ, ದಾಮೋದರ ಕುಸಮಳಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು