ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆ

ಬೆಳಗಾವಿ: ಇಲ್ಲಿನ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಸ್ವಾಯತ್ತ ಕಾಲೇಜಿನ ಎನ್‌ಸಿಸಿ ಕೆಡೆಟ್ ಅರುಣಕುಮಾರ ಎಸ್. ಗಣರಾಜ್ಯೋತ್ಸವ ಪರೇಡ್‌ಗೆ ಆಯ್ಕೆಯಾಗಿದ್ದಾರೆ.
ಬಿ.ಎ. ಅಂತಿಮ ವರ್ಷದಲ್ಲಿರುವ ಅವರು ಜ.26ರಂದು ನವದೆಹಲಿಯಲ್ಲಿ ನಡೆಯುವ ಪರೇಡ್‌ನಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯದ ಘಟಕವನ್ನು ಪ್ರತಿನಿಧಿಸಲಿದ್ದಾರೆ.
ಬೆಂಗಳೂರಿನಲ್ಲಿ ಈಚೆಗೆ ಜರುಗಿದ ಅಂತಿಮ ಪ್ರಕ್ರಿಯೆಯಲ್ಲಿ ಅವರು ಆಯ್ಕೆಯಾಗಿದ್ದಾರೆ. ಅವರನ್ನು 26–ಕರ್ನಾಟಕ ಎನ್‌ಸಿಸಿ ಘಟಕದ ಕಮಾಂಡಿಂಗ್ ಅಧಿಕಾರಿ ಕರ್ನಲ್ ರಾಜೀವ ಖಜೋರಿಯಾ, ಕರ್ನಲ್ ಆದಿತ್ಯ ವರ್ಮಾ ತರಬೇತಿ ನೀಡಿದ್ದರು.
ವಿದ್ಯಾರ್ಥಿಯನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಪ್ರಾಚಾರ್ಯರಾದ ಡಾ.ಬಿ.ಎಂ. ತೇಜಸ್ವಿ, ಗಿರಿಜಾ ಹಿರೇಮಠ, ಕಾಲೇಜಿನ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ ಗುರನಗೌಡರ ಅಭಿನಂದಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.