ಭಾನುವಾರ, 14 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂಡಲಗಿ: ಮತದಾನ ಜಾಗೃತಿಗಾಗಿ ಸೆಲ್ಫಿ ವಿಂಡೋ

Published 28 ಮಾರ್ಚ್ 2024, 15:53 IST
Last Updated 28 ಮಾರ್ಚ್ 2024, 15:53 IST
ಅಕ್ಷರ ಗಾತ್ರ

ಮೂಡಲಗಿ: ‘ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಸುಭದ್ರ ಸರ್ಕಾರ ಸ್ಥಾಪಿಸಲು ಕೈಜೋಡಿಸಬೇಕು’ ಎಂದು ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಹೇಳಿದರು.

ತಾಲ್ಲೂಕು ಸ್ವೀಪ್‌ ಸಮಿತಿ ಹಾಗೂ ಪುರಸಭೆಯಿಂದ ಸ್ಥಳೀಯ ಬಸ್‌ ನಿಲ್ದಾಣದ ಆವರಣದಲ್ಲಿ ಮತದಾನದ ಜಾಗೃತಿಗಾಗಿ ಸ್ಥಾಪಿಸಿರುವ ಸೆಲ್ಫಿ ವಿಂಡೋ ಮತ್ತು ಸಹಿ ಅಭಿಯಾನದಲ್ಲಿ ಅವರು ಮಾತನಾಡಿದರು.

‘ದೇಶದ ಪ್ರತಿಯೊಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕನ್ನು ಸಂವಿಧಾನವು ನೀಡಿದ್ದು, ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ತರಬೇಕು’ ಎಂದರು.

ಪುರಸಭೆ ಪ್ರಭಾರ ಮುಖ್ಯಾಧಿಕಾರಿ ಸಿ.ಬಿ. ಪಾಟೀಲ, ಪಾಂಡು ಬಂಗೆನ್ನವರ, ಪ್ರಿತಮ ಬೋವಿ, ಕಂದಾಯ ವಿಭಾಗದ ಚಿಕ್ಕೂರೆ, ರಮೇಶ ಆಲಗೂರ, ಸಾರಿಗೆ ಇಲಾಖೆಯ ಬಿ.ಬಿ. ದಂಡಾಪೂರ ಹಾಗೂ ಪುರಸಭೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT