ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಕ್ಕೆ ಸಿದ್ಧವಾಗಲು ಪದವೀಧರರಿಗೆ ಸಲಹೆ

Last Updated 12 ಮೇ 2019, 12:45 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನ ಉದ್ಯೋಗ ಮತ್ತು ತರಬೇತಿ ವಿಭಾಗದಿಂದ ‘ವಿಜ್ಞಾನ ಮತ್ತು ತಂತ್ರಜ್ಞಾನ ಉದ್ಯೋಗದಾತರಿಂದ ಉದ್ಯಮದ ನಿರೀಕ್ಷೆಗಳು’ ವಿಷಯ ಕುರಿತು ಶನಿವಾರ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಖ್ಯಅತಿಥಿಯಾಗಿದ್ದ ಬೆಂಗಳೂರಿನ ವಿಪ್ರೋ ಕಂಪನಿಯ ಪ್ರಧಾನ ವ್ಯವಸ್ಥಾಪಕ ರಾಜೀವ ಕುಲಕರ್ಣಿ ಮಾತನಾಡಿ, ‘ವಿದ್ಯಾರ್ಥಿಗಳು ಸೃಜನಶೀಲತೆ ಹಾಗೂ ಕೌಶಲ ಬೆಳೆಸಿಕೊಳ್ಳಬೇಕು. ಕಂಪನಿಗಳು ಬಯಸುವ ಯೋಜನೆಗಳಲ್ಲಿ ಕೆಲಸ ಮಾಡಲು ಸಿದ್ಧರಾಗಬೇಕು. ಬದಲಾಗುತ್ತಿರುವ ತಂತ್ರಜ್ಞಾನಗಳ ಬಗ್ಗೆ ತಿಳಿದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಸಿದ್ದರಾಮಪ್ಪ ಇಟ್ಟಿ ಮಾತನಾಡಿದರು. ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾಲೇಜಿನ ಅಧ್ಯಕ್ಷ ಎಸ್.ಜಿ. ಸಂಬರಗಿಮಠ ಇದ್ದರು.

ರವೀಂದ್ರ ಯರಗಟ್ಟಿಮಠ ಸ್ವಾಗತಿಸಿದರು. ಪದ್ಮಾ, ಅನುಷಾ ಪರಿಚಯಿಸಿದರು. ಅಪೂರ್ವಾ ನಿರೂಪಿಸಿದರು. ಸೌಮ್ಯಶ್ರೀ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT