ಶನಿವಾರ, ಅಕ್ಟೋಬರ್ 16, 2021
22 °C

ರಾಷ್ಟ್ರೀಯ ಪಾರಂಪರಿಕ ಔಷಧಿ ಸಂಸ್ಥೆಯ ನಿರ್ದೇಶಕ ಚಟ್ಟೋಪಾಧ್ಯಾಯಗೆ ಬೀಳ್ಕೊಡುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ನೆಹರೂ ನಗರದಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್‌)– ರಾಷ್ಟ್ರೀಯ ಪಾರಂಪರಿಕ ಔಷಧಿ ಸಂಸ್ಥೆಯ ನಿರ್ದೇಶಕ ಡಾ.ದೇಬಪ್ರಸಾದ್ ಚಟ್ಟೋಪಾಧ್ಯಾಯ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸನ್ಮಾನಿಸಿ ಶನಿವಾರ ಬೀಳ್ಕೊಡಲಾಯಿತು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಐಸಿಎಂಆರ್-ಎನ್ಐಟಿಎಂ ಕೇಂದ್ರದಲ್ಲಿ ಕೋವಿಡ್ ಪ್ರಯೋಗಾಲಯದ ಮೂಲಕ ತ್ವರಿತವಾಗಿ ‌ವರದಿಗಳನ್ನು ನೀಡುವ ಮೂಲಕ ನಿಯಂತ್ರಣ ಕ್ರಮಗಳಿಗೆ ನೆರವಾದರು’ ಎಂದು ಸ್ಮರಿಸಿದರು.

ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ, ‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಸಂದರ್ಭದಲ್ಲಿ ಅತ್ಯಂತ ಒತ್ತಡದ ಮಧ್ಯೆಯೂ ಕೋವಿಡ್ ಪರೀಕ್ಷಾ ವರದಿಯನ್ನು ಸಕಾಲದಲ್ಲಿ ನೀಡಲು ಚಟ್ಟೋಪಾಧ್ಯಾಯ ಸಹಕರಿಸಿದರು’ ಎಂದು ನೆನೆದರು.

ಜಿಲ್ಲಾ ಪಂಚಾಯ್ತಿ ಸಿಇಒ ಎಚ್‌.ವಿ. ದರ್ಶನ್, ಡಿಎಚ್‌ಒ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.