ಶನಿವಾರ, ಮೇ 28, 2022
21 °C

ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಬೀಳ್ಕೊಡುಗೆ, ಸ್ವಾಗತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೇಸರಗಿ: ಸಮೀಪದ ಗಜಮಿನಾಳ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ 20 ವರ್ಷ ಕಾರ್ಯನಿರ್ವಹಿಸಿದ ಶಿಕ್ಷಕ ಐ.ಎಸ್. ಗಡದವರ ಹಾಗೂ 11 ವರ್ಷಗಳಿಂದಿದ್ದ ಜಿ.ಐ. ದಾರಪ್ಪನವರ ಅವರು ದೇಶನೂರ ಶಾಲೆಗೆ ವರ್ಗಾವಣೆಯಾದ ಪ್ರಯುಕ್ತ ಸನ್ಮಾನಿಸಿ ಈಚೆಗೆ ಬೀಳ್ಕೊಡಲಾಯಿತು.

ಇದೇ ವೇಳೆ ಹಣಬರಹಟ್ಟಿ ಶಾಲೆಯಿಂದ ವರ್ಗಾವಣೆಯಾಗಿ ಬಂದ ಶಿಕ್ಷಕ ಎ.ಎಸ್. ಉಳಿವಿ ಅವರನ್ನು ಸ್ವಾಗತಿಸಿಕೊಳ್ಳಲಾಯಿತು.

ಮುಖ್ಯಶಿಕ್ಷಕ ಎಂ.ಎಲ್. ಮಾರಿಹಾಳ, ಹಣಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಿರು ವಾರಿ, ಅಡುಗೆ ಸಿಬ್ಬಂದಿ, ಅಂಗನವಾಡಿ ಶಿಕ್ಷಕಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಶಿಕ್ಷಕ ಎಸ್.ಎ. ನಲವಡೆ ಸ್ವಾಗತಿಸಿದರು. ಶಿಕ್ಷಕ ಯು.ಎಸ್. ಹುಡೇದ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು