ಕಿಣಯೇ (ಬೆಳಗಾವಿ): ಬಿಜೆಪಿ ನಾಯಕರು ನಡೆಸಿದ ಮೈಸೂರು ಪಾದಯಾತ್ರೆ ಮುಕ್ತಾಯವಾದ ಬೆನ್ನಲ್ಲೇ, ಪಾದಯಾತ್ರೆಯಿಂದ ದೂರ ಉಳಿದಿದ್ದ ನಾಯಕರು ಇಲ್ಲಿ ಪ್ರತ್ಯೇಕ ಸಭೆ ನಡೆಸುತ್ತಿದ್ದಾರೆ.
ಬೆಳಗಾವಿಯಿಂದ ಖಾನಾಪುರ ತಾಲ್ಲೂಕಿನ ಜಾಂಬೋಟಿಗೆ ಸಂಪರ್ಕ ಕಲ್ಪಿಸುವ ಮಾರ್ಗದ ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಸಭೆ ಕುತೂಹಲ ಮೂಡಿಸಿದೆ.
ಶಾಸಕರಾದ ರಮೇಶ ಜಾರಕಿಹೊಳಿ, ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಅರವಿಂದ ಲಿಂಬಾವಳಿ ಮತ್ತಿತರ ನಾಯಕರು ಪಾಲ್ಗೊಂಡಿದ್ದಾರೆ. ಇನ್ನೂ ಹಲವರು ಬರುತ್ತಿದ್ದಾರೆ.
'ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡ ಬಿಜೆಪಿಯ ಈ ನಾಯಕರು ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸುತ್ತಿದ್ದಾರೆ' ಎಂದು ಮೂಲಗಳು ಖಚಿತಪಡಿಸಿವೆ.