ಸೋಮವಾರ, ಡಿಸೆಂಬರ್ 5, 2022
26 °C

ಸರ್ವರ್‌ ಸಮಸ್ಯೆ: ರಾತ್ರಿಯವರೆಗೂ ದಾಖಲೆ ಪರಿಶೀಲನೆ

ಪ್ರಜಾವಾಣಿ ವಾರ್ತೆ ‌‌ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಇಲ್ಲಿನ ಪಾಟೀಲ ಗಲ್ಲಿಯ ಉಷಾತಾಯಿ ಗೋಗಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ(6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆಯಲ್ಲಿ ಆಯ್ಕೆಯಾದವರ ಮೂಲ ದಾಖಲೆಗಳ ಪರಿಶೀಲನೆ ಸರ್ವರ್‌ ಸಮಸ್ಯೆಯಿಂದಾಗಿ ಶುಕ್ರವಾರ ರಾತ್ರಿ 8ರವರೆಗೂ ನಡೆಯಿತು.

ಈ ನೇಮಕಾತಿಯಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 1:2ರ ಅನುಪಾತದಲ್ಲಿ ಪ್ರಕಟಿಸಲಾಗಿದೆ. ಮೊದಲ ದಿನದಂದು 100 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಬೇಕಿತ್ತು. ಸರ್ವರ್‌ ಸಮಸ್ಯೆ, ಸರಿಯಾದ ದಾಖಲೆ ಇಲ್ಲದಿರುವುದು ಮತ್ತಿತರ ಕಾರಣದಿಂದ ಎಲ್ಲ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಪೂರ್ಣಗೊಂಡಿರಲಿಲ್ಲ.

ಎರಡನೇ ದಿನದಂದು ಆ ಅಭ್ಯರ್ಥಿಗಳ ಜೊತೆಗೆ, ಮತ್ತೆ 150 ಅಭ್ಯರ್ಥಿಗಳ ದಾಖಲೆ ಪರಿಶೀಲಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು