ಬೆಳಗಾವಿ: ‘ಗೋಕಾಕದ ಮಹಾಲಕ್ಷ್ಮಿ ಅರ್ಬನ್ ಕೋ–ಆಪ್ ಕ್ರೆಡಿಟ್ ಬ್ಯಾಂಕ್‌ನಲ್ಲಿ ₹74.87 ಕೋಟಿ ವಂಚನೆ ಆಗಿದೆ. ಬ್ಯಾಂಕ್‌ನ ವ್ಯವಸ್ಥಾಪಕ, ಗುಮಾಸ್ತ ಸೇರಿ 14 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಬಂಧನಕ್ಕೆ ಮೂರು ತಂಡ ರಚಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದರು.
‘ಪ್ರಕರಣ ಸಂಬಂಧ ಬ್ಯಾಂಕ್‌ನ ಅಧ್ಯಕ್ಷ ಜಿತೇಂದ್ರ ಬಾಳಾಸಾಹೇಬ ಮಾಂಗಳೇಕರ ದೂರು ದಾಖಲಿಸಿದ್ದಾರೆ. ದೊಡ್ಡ ಮೊತ್ತದ ಪ್ರಕರಣವಾದ್ದರಿಂದ ಇದನ್ನು ಸಿಐಡಿಗೆ ಹಸ್ತಾಂತರಿಸಲು ಪತ್ರ ಬರೆಯಲಾಗಿದೆ. ಅಲ್ಲಿಯವರೆಗೆ ನಾವು ತನಿಖೆ ನಡೆಸುತ್ತೇವೆ’ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಬ್ಯಾಂಕ್‌ನ ವ್ಯವಸ್ಥಾಪಕ ಸಿದ್ದಪ್ಪ ಸದಾಶಿವ ಪವಾರ, ಸಿಬ್ಬಂದಿ ಸಾಗರ ಹನಮಂತ ಸಬಕಾಳೆ, ವಿಶ್ವನಾಥ ಅಶೋಕ ಬಾಗಡೆ, ಸಂಬಾಜಿ ಮಲ್ಲಪ್ಪ ಘೋರ್ಪಡೆ, ದಯಾನಂದ ಶಿವಾಜಿ ಉಪ್ಪಿನ, ಸಂಜನಾ ಸಾಗರ ಸಬಕಾಳೆ, ಮಾಲವ್ವ ಹಣಮಂತ ಸಬಕಾಲೆ, ಗೌರವ್ವ ಬಾಳಪ್ಪ ಹವಾಲ್ದಾರ, ಚಂದ್ರವ್ವ ಹವಾಲ್ದಾರ, ಮಾಯವ್ವ ಮಾಯಪ್ಪ ಜಾಧವ, ಪರಸಪ್ಪ ಯಲ್ಲಪ್ಪ ಮಾಲೋಜಿ, ರಾಧಾ ಪರಸಪ್ಪ ಮಾಲೋಜಿ, ಸಂದೀಪ ಬಸವರಾಜ ಮರಾಠೆ ಮತ್ತು ಕಿರಣ ಸಕಾರಾಮ ಸುಪಲಿ ನಾಪತ್ತೆ ಆಗಿದ್ದಾರೆ. ಇವರೆಲ್ಲ ಸೇರಿ 2021ರಲ್ಲಿ ₹6 ಕೋಟಿ ಠೇವಣಿ ಇಟ್ಟಿದ್ದರು. ಅದರ ಮೇಲೆ ಪದೇಪದೇ ಸಾಲ ಪಡೆದು ಮರಳಿ ಕಟ್ಟದೇ ವಂಚಿಸಿದ್ದಾರೆ’ ಎಂದು ಅವರು ತಿಳಿಸಿದರು.
‘ಆರು ಶಾಖೆಗಳನ್ನು ಹೊಂದಿರುವ ಈ ಬ್ಯಾಂಕ್‌ಗೆ 3 ಸಾವಿರಕ್ಕೂ ಹೆಚ್ಚು ಠೇವಣಿದಾರರು ಇದ್ದಾರೆ. ಅವರ ಹಣದ ರಕ್ಷಣೆಗೆ ಕ್ರಮ ವಹಿಸಲಾಗುವುದು. ಆರೋಪಿಗಳ ಆಸ್ತಿ ಪತ್ತೆ ಮಾಡಲಾಗುವುದು’ ಎಂದರು.