ಮಂಗಳವಾರ, ಆಗಸ್ಟ್ 9, 2022
23 °C

ಬೆಳಗಾವಿ ಅಪಘಾತ: ಶವಗಳನ್ನು ಊರಿನತ್ತ ಒಯ್ದ ಸಂಬಂಧಿಗಳು, ನಿಲ್ಲದ ಆಕ್ರಂದನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಮೃತಪಟ್ಟ ಏಳು ಜನರ ಮರಣೋತ್ತರ ಪರೀಕ್ಷೆ ಭಾನುವಾರ ಸಂಜೆಗೆ ಮುಕ್ತಾಯವಾಗಿದ್ದು. ಕುಟುಂಬಸ್ಥರು ತಮ್ಮ ಊರುಗಳಿಗೆ ಶವಗಳನ್ನು ತೆಗೆದುಕೊಂಡು ಹೋದರು.

ಇಲ್ಲಿನ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಶವಗಳನ್ನು ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತು.

ಇದನ್ನೂ ಓದಿ:  

ಕೊನೆಯ ಬಾರಿ ಮುಖ ನೋಡಲು ಶವಾಗಾರದ ಮುಂದೆ ಸೇರಿದ ಗ್ರಾಮಸ್ಥರು, ಕುಟುಂಬಸ್ಥರು, ಸ್ನೇಹಿತರು ಇನ್ನಿಲ್ಲದಂತೆ ಗೋಗರೆದರು. 

ಆಸ್ಪತ್ರೆ ಮುಂಭಾಗದಲ್ಲಿ ರಸ್ತೆ ಮೇಲೆ ಬಿದ್ದು ಹೊರಳಾಡಿದ ಮಹಿಳೆಯರನ್ನು ಸಮಾಧಾನ ಮಾಡಲು ಪೊಲೀಸರು, ಆಸ್ಪತ್ರೆ ಸಿಬ್ಬಂದಿ ಪರದಾಡಿದರು.

ಬಳಿಕ ಆಸ್ಪತ್ರೆ ಸಿಬ್ಬಂದಿ ಶವಗಳನ್ನು ಆಂಬುಲೆನ್ಸ್ ನಲ್ಲಿ ಹಾಕಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು