ಬೆಳಗಾವಿ: ರಾಜ್ಯದಲ್ಲಿ ‘ಶಕ್ತಿ’ ಯೋಜನೆಯಡಿ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಸಲ ಸಂಚರಿಸಿದ ಹಿನ್ನೆಲೆಯಲ್ಲಿ ಇಲ್ಲಿನ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಲಾಯಿತು.

ವಿವಿಧೆಡೆಯಿಂದ ಬೆಳಗಾವಿ ನಿಲ್ದಾಣಕ್ಕೆ ಬಂದಿಳಿದ ಮತ್ತು ಇಲ್ಲಿಂದ ವಿವಿಧೆಡೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು. ಬೆಳಗಾವಿ–ಧಾರವಾಡ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಬಸ್ಗೆ ಪೂಜೆ ಸಲ್ಲಿಸಲಾಯಿತು.

ಶಾಸಕ ಆಸಿಫ್ ಸೇಠ್, ‘ಶಕ್ತಿ ಯೋಜನೆಗೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ಸಿಕ್ಕಿದೆ. ನಿತ್ಯ ದುಡಿಮೆಗೆ ಹೋಗುವವರು, ಶಾಲಾ–ಕಾಲೇಜಿಗೆ ಹೋಗುವವರು, ವೈದ್ಯಕೀಯ ಸೇವೆ ಪಡೆಯಲು ಹೋಗುವ ಮಹಿಳೆಯರು ಇದರ ಲಾಭ ಪಡೆಯುತ್ತಿದ್ದಾರೆ. ಮುಂದಿನ ಎರಡೂವರೆ ವರ್ಷವೂ ಈ ಯೋಜನೆ ಮುಂದುವರಿಯಲಿದೆ’ ಎಂದರು.

‘ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಿವೆ. ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಿದ ₹12,669 ಕೋಟಿ ಶುಲ್ಕವನ್ನು ಸರ್ಕಾರವು ಸಾರಿಗೆ ಸಂಸ್ಥೆಗೆ ಪಾವತಿಸಿದೆ’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ, ‘ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದೇವೆ. ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಮಹಿಳೆಯರಿಗೆ ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸಲು ಅನುಕೂಲವಾಗಿದೆ’ ಎಂದು ತಿಳಿಸಿದರು.

ಸಾರಿಗೆ ಸಂಸ್ಥೆಯ ಬೆಳಗಾವಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಹುದ್ದಾರ, ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸದಸ್ಯರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.