ಶುಕ್ರವಾರ, ಆಗಸ್ಟ್ 12, 2022
27 °C

ಶಂಕರಗೌಡ ಪಾಟೀಲ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡಿರುವ ಬೆಳಗಾವಿಯ ಶಂಕರಗೌಡ ಪಾಟೀಲ ಅವರು ಮಂಗಳವಾರ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕರ್ನಾಟಕ ಭವನದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೇಂದ್ರ ಸರ್ಕಾರದ ಹಾಗೂ ದೆಹಲಿ‌ ಕಚೇರಿಗಳಲ್ಲಿ ಕರ್ನಾಟಕ ಸರ್ಕಾರದ ಬಾಕಿ ಇರುವ ಯೋಜನೆಗಳಿಗೆ ಅನುಮೋದನೆ ದೊರಕಿಸುವ ನಿಟ್ಟಿನಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಬಾಕಿ ಇರುವ ಪ್ರಸ್ತಾವಗಳ ಸಮಗ್ರ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಭವನದ ವಿಶೇಷ ನಿವಾಸಿ ಆಯುಕ್ತ ವಿಜಯ ರಂಜನ್‌ಸಿಂಗ್, ಹೆಚ್ಚುವರಿ ನಿವಾಸಿ ಆಯುಕ್ತ ಗುರುನೀತ್ ತೇಜ್, ಉಪ ನಿವಾಸಿ ಆಯುಕ್ತ ಎಚ್. ಪ್ರಸನ್ನ ಮತ್ತು ಅಧಿಕಾರಿಗಳು ಇದ್ದರು.

ಬಳಿಕ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು