ಸೋಮವಾರ, ಮೇ 23, 2022
30 °C

ಮೇ 11ರಂದು ಬೆಳಗಾವಿಯಲ್ಲಿ ಶರದ್‌ ಪವಾರ್‌ ಪ್ರವಾಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರು ಮೇ 11ರಂದು ಬೆಳಗಾವಿಗೆ ಭೇಟಿ ನೀಡಲಿದ್ದು, ಅಂದು ಚನ್ನಮ್ಮ ವೃತ್ತದಲ್ಲಿ ಸತ್ಕರಿಸಲಾಗುವುದು‘ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಆರ್.ಹರಿ ತಿಳಿಸಿದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ಪವಾರ್‌ ಅವರು ನಗರದಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ’ ಎಂದರು.

‘ಮುಂಬರುವ ಪ್ರತಿ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ 18  ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಹಾಕಲಾಗುವುದು. ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದರು.

‘ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಅದರ ವಿರುದ್ಧ ಹೋರಾಟ ನಡೆಸಲಾಗುವುದು’ ಎಂದು ತಿಳಿಸಿದರು.

ಮುಖಂಡರಾದ ಅಮೋಲ ದೇಸಾಯಿ, ಕೆ.ಜಿ. ಪಾಟೀಲ, ನಾರಾಯಣ ಬಸರಗಿ, ದುರ್ಗೇಶ ಮೇತ್ರಿ, ಅಪ್ಪಾಸಾಹೇಬ ನಾಯಕ, ಸುರೇಂದ್ರ ಪಾಲ್ಗೊಂಡಿದ್ದರು.

ಪವಾರ್‌ ಭೇಟಿ: ಪವಾರ್‌ ಅವರು ಕೋವಿಡ್‌ನಿಂದ ಈಚೆಗೆ ನಿಧನರಾದ ತಮ್ಮ ಸ್ನೇಹಿತರಾಗಿದ್ದ ಅರವಿಂದ ಗೋಗಟೆ ಅವರ ಕುಟುಂಬದವರನ್ನು ಮಂಗಳವಾರ ಭೇಟಿಯಾಗಿ ಸಾಂತ್ವನ ಹೇಳಿದರು. ಈ  ವೇಳೆ ಅವರನ್ನು ಕೆಎಲ್‌ಇ ಸೊಸೈಟಿ ನಿರ್ದೇಶಕ ಮಹಾಂತೇಶ ಕವಟಗಿಮಠ ಹಾಗೂ ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ಹ ಸಹಕಾರಿಯ ನಿರ್ದೇಶಕಿ ಪ್ರೀತಿ ದೊಡ್ಡವಾಡ ಬರಮಾಡಿಕೊಂಡರು. ಮಹಾರಾಷ್ಟ್ರ ಚಂದಗಡ ಶಾಸಕ ರಾಜೇಶ್‌ ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು