ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿಕಲಾ ಜೊಲ್ಲೆಗೆ ಮತ್ತೆ ಸಚಿವ ಸ್ಥಾನ: ಪರಿಚಯ ಇಲ್ಲಿದೆ

Last Updated 4 ಆಗಸ್ಟ್ 2021, 7:15 IST
ಅಕ್ಷರ ಗಾತ್ರ

ಶಶಿಕಲಾ ಜೊಲ್ಲೆ ಪರಿಚಯ

ಹೆಸರು: ಶಶಿಕಲಾ ಜೊಲ್ಲೆ

ವಯಸ್ಸು: 52

ಕ್ಷೇತ್ರ: ನಿಪ್ಪಾಣಿ, ಬೆಳಗಾವಿ ಜಿಲ್ಲೆ

ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ಜಾತಿ: ವೀರಶೈವ ಲಿಂಗಾಯತ (ಚತುರ್ಥ)

ವಿಧಾನಸಭೆ ಸದಸ್ಯತ್ವ: 2008ರಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. 2013 ಮತ್ತು 2018ರ ಚುನಾವಣೆಯಲ್ಲಿ ಗೆದ್ದಿದ್ದಾರೆ.‌

ಸಚಿವರಾದ ಅನುಭವ: ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಣೆ. ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಈಗ 2ನೇ ಬಾರಿಗೆ ಸಚಿವ ಸ್ಥಾನ ದೊರೆತಿದೆ. ಜೊಲ್ಲೆ ಉದ್ಯೋಗ ಸಮೂಹದ ಮೂಲಕ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಅವರ ಪತಿ, ಅಣ್ಣಾಸಾಹೇಬ ಜೊಲ್ಲೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹಾಲಿ ಸಂಸದ.

ವೃತ್ತಿ: ಕೃಷಿ, ಉದ್ಯಮಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT