ಮಂಗಳವಾರ, ಅಕ್ಟೋಬರ್ 27, 2020
25 °C

ಕೆ. ಕಲ್ಯಾಣ್ ಪತ್ನಿ ಹಾಗೂ ಕುಟುಂಬದವರಿಗೆ ಹಣ ವರ್ಗಾವಣೆ: ಆರೋಪಿ ಪೊಲೀಸರ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಚಲನಚಿತ್ರ ಗೀತರಚನೆಕಾರ ಕೆ. ಕಲ್ಯಾಣ್ ಪತ್ನಿ ಹಾಗೂ ಕುಟುಂಬದವರಿಗೆ ಹಣ ವರ್ಗಾವಣೆ ಮಾಡಿಸಿಕೊಂಡು ಮೋಸ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಶಿವಾನಂದ ವಾಲಿ ಅವರನ್ನು ಇಲ್ಲಿನ ಜೆಎಂಎಫ್ ನ್ಯಾಯಾಲಯ ಅ.12ರವರೆಗೆ ಪೊಲೀಸ್ ವಶಕ್ಕೆ ನೀಡಿದೆ.

ಹೆಚ್ಚಿನ ವಿಚಾರಣೆಗೆ ಒಳಪಡಿಸುವುದಕ್ಕಾಗಿ ಮಾಳಮಾರುತಿ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದರು. ನ್ಯಾಯಾಲಯ ಇದನ್ನು ‍ಪುರಸ್ಕರಿಸಿದೆ. ಆರೋಪಿಯನ್ನು ಪೊಲೀಸರು ಭಾನುವಾರ ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಇನ್‌ಸ್ಪೆಕ್ಟರ್‌ ಬಿ.ಆರ್. ಗಡ್ಡೇಕರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಈ ನಡುವೆ, ಆರೋಪಿ ಪರ ವಕೀಲರಿಂದ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆಯಾಗಿದ್ದು, ವಿಚಾರಣೆಯನ್ನು ಅ.12ಕ್ಕೆ ನಿಗದಿಪಡಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.