ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಗಡಿ ಸಂರಕ್ಷಣಾ ಆಯೋಗ: ಬೆಳಗಾವಿಯಲ್ಲಿ ಕಚೇರಿ’

Published 14 ಮಾರ್ಚ್ 2024, 5:40 IST
Last Updated 14 ಮಾರ್ಚ್ 2024, 5:40 IST
ಅಕ್ಷರ ಗಾತ್ರ

ಬೆಳಗಾವಿ: ‘ಕರ್ನಾಟಕ ಗಡಿ ಮತ್ತು ನದಿಗಳ ಸಂರಕ್ಷಣಾ ಆಯೋಗವನ್ನು ಪುನರ್ ರಚಿಸಲಾಗುವುದು. ಅದಕ್ಕೂ ಮುನ್ನ, ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಕಚೇರಿ ಆರಂಭಿಸಲಾಗುವುದು. ಆಯೋಗದ ಒಬ್ಬ ಸದಸ್ಯ ಇಲ್ಲಿದ್ದು ಜನರ ಕುಂದುಕೊರತೆಗೆ ಸ್ಪಂದಿಸಲಿದ್ದಾರೆ’ ಎಂದು ಆಯೋಗದ ಅಧ್ಯಕ್ಷ ಶಿವರಾಜ್ ಪಾಟೀಲ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಸ್ತುತ ಇರುವ ಆಯೋಗ ಪೂರ್ಣ ಪ್ರಮಾಣದಲ್ಲಿ ಕಾರ್ಯರೂಪಕ್ಕೆ ಬಂದಿಲ್ಲ. ಹಾಗಾಗಿ ರಾಜ್ಯದ ವಿವಿಧೆಡೆಯ ಸದಸ್ಯರನ್ನು ಸೇರಿಸಿ, ನಾಲ್ಕೇ ತಿಂಗಳಲ್ಲಿ ಪುನರ್ ರಚಿಸಲಾಗುವುದು. ಬೆಳಗಾವಿಯ ಆಸಕ್ತರಿಗೆ ಅವಕಾಶ ಕಲ್ಪಿಸಲಾಗುವುದು’ ಎಂದರು.

‘ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಆಯೋಗದ ಸದಸ್ಯರು ಮತ್ತು ಸಿಬ್ಬಂದಿ ಲಭ್ಯವಿರುತ್ತಾರೆ. ಆಯೋಗಕ್ಕಾಗಿ ಜಿಲ್ಲಾಡಳಿತದಿಂದ ಎರಡು ಕೊಠಡಿ ಸಿಗಲಿವೆ. ಮುಂದಿನ ದಿನಗಳಲ್ಲಿ ಆಯೋಗದ ಪ್ರಾದೇಶಿಕ ಕಚೇರಿ ಸ್ಥಾಪಿಸುವ ಸಂಬಂಧ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು’ ಎಂದರು.

‘ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕದ ಪರವಾಗಿ ಸಮರ್ಥವಾಗಿ ವಾದ ಮಂಡನೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಾನೂನಾತ್ಮಕ ಹಾಗೂ ರಾಜಕೀಯವಾಗಿ ಹೋರಾಟಕ್ಕೆ ಸಂಬಂಧಿಸಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳ ಸಲಹೆ ಮತ್ತು ಹಕ್ಕೊತ್ತಾಯಗಳನ್ನು ಸರ್ಕಾರದ ಗಮನಕ್ಕೆ ತಂದು ರಚನಾತ್ಮಕ ಕೆಲಸ ಹಮ್ಮಿಕೊಳ್ಳಲಾಗುವುದು. ಮಹಾರಾಷ್ಟ್ರ ಮಾದರಿಯಲ್ಲಿ ಗಡಿ ಸಚಿವರನ್ನು ನೇಮಿಸುವ ಸಂಬಂಧ ಸರ್ಕಾರದ ಗಮನ ಸೆಳೆಯಲಾಗುವುದು’ ಎಂದು ಅವರು ಗಡಿ ಕನ್ನಡಿಗರ ಪ್ರಶ್ನೆಗೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT