ಶುಕ್ರವಾರ, ಡಿಸೆಂಬರ್ 4, 2020
22 °C

ತಡೆಯಾಜ್ಞೆ ಆದೇಶ ಉಲ್ಲಂಘನೆ: ಡಿಸಿಪಿ ಸೀಮಾಗೆ ಕಾರಣ ಕೇಳಿ ನೋಟಿಸ್’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನ್ಯಾಯಾಲಯದ ತಡೆಯಾಜ್ಞೆ ಆದೇಶ ಉಲ್ಲಂಘಿಸಿದ್ದ ಆರೋಪದಡಿ ಇಲ್ಲಿನ ಹಿಂದಿನ ಡಿಸಿಪಿ ಸೀಮಾ ಲಾಟ್ಕರ್ ಅವರಿಗೆ 10ನೇ ಹೆಚ್ಚುವರಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ’ ಎಂದು ವಕೀಲ ಜಾಹೀರ್ ಹತ್ತರಕಿ ತಿಳಿಸಿದರು.

‘ಗಾಂಧಿನಗರದ‌ ನಿವಾಸಿ ಮಲ್ಲಿಕ್ ಜಾನ್ ಪಠಾಣ್ ಹಾಗೂ ಸಂಬಂಧಿಕರಿಗೆ ಸೇರಿದ ಆಸ್ತಿ ವ್ಯಾಜ್ಯ ಸಂಬಂಧ ಸಿಆರ್‌ಪಿಸಿ ಕಲಂ 107ರಲ್ಲಿ ಲಾಟ್ಕರ್ ವಿಚಾರಣೆ ನಡೆಸಿದ್ದರು. ಮಲ್ಲಿಕ್ ಜಾನ್ ಅವರಿಗೆ ಜೂನ್ 6ರಂದು ನೋಟಿಸ್ ಜಾರಿಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಮಲ್ಲಿಕ್ ನ್ಯಾಯಾಲಯದ ಮೊರೆ ಹೋಗಿದ್ದರು. ಲಾಟ್ಕರ್‌ ನೀಡಿದ್ದ ನೋಟಿಸ್‌ಗೆ ನ್ಯಾಯಾಲಯ ಜೂನ್ 29ಕ್ಕೆ ತಡೆಯಾಜ್ಞೆ ನೀಡಿತ್ತು. ಆದೇಶ ಪ್ರತಿಯನ್ನು ಮಲ್ಲಿಕ್ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಸಲ್ಲಿಸಿದ್ದರು’ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

‘ಅ.9ರಂದು ಇದೇ ಪ್ರಕರಣದಡಿ ವಿಚಾರಣೆ ನಡೆಸಿದ್ದ ಸೀಮಾ ಮಲ್ಲಿಕ್ ಜಾನ್‌ಗೆ ಮತ್ತೆ ನೋಟಿಸ್ ನೀಡಿದ್ದರು. ತಡೆಯಾಜ್ಞೆ ಇದ್ದರೂ‌ ಇನ್ನೊಂದು ನೋಟಿಸ್ ನೀಡಿದ್ದನ್ನು ಅವರು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಹೇಮಂತ್ ಅವರು ನ. 26ಕ್ಕೆ ಹಾಜರಾಗಿ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ಜಾರಿಗೊಳಿಸಿ ಆದೇಶಿಸಿದ್ದಾರೆ’ ಎಂದು ತಿಳಿಸಿದರು. ಅರ್ಜಿದಾರರ ಪರ ಜಾಹೀರ್ ವಕಾಲತ್ತು ವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು