ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಯಡೂರದ ಕಾಡಸಿದ್ದೇಶ್ವರ ಮಠದ ಪೀಠಾಧಿಪತಿಯೂ ಆಗಿರುವ ಶ್ರೀಶೈಲ ಪೀಠದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಕೋವಿಡ್–19 ದೃಢಪಟ್ಟಿದೆ.

‘ಅವರು ತಾಲ್ಲೂಕಿನ ಯಡೂರದಲ್ಲಿ ಹೋಂ ಐಸೋಲೇಷನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ. ಭಕ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಶ್ರೀಶೈಲ ಕ್ಷೇತ್ರದಲ್ಲಿ ನಡೆದ ಯುಗಾದಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಯ ಸೇವಾ ಸಿಬ್ಬಂದಿಗೂ ಕೋವಿಡ್ ದೃಢಪಟ್ಟಿದೆ. ಇತ್ತೀಚೆಗೆ ತಮ್ಮ ಮತ್ತು ಸಿಬ್ಬಂದಿ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಎಚ್ಚರಿಕೆ ವಹಿಸಬೇಕು ಎಂದು ಸ್ವಾಮೀಜಿ ತಿಳಿಸಿದ್ದಾರೆ’ ಎಂದು ಮಠದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.