ಭಾನುವಾರ, ನವೆಂಬರ್ 28, 2021
19 °C

ಸತೀಶ ಜಾರಕಿಹೊಳಿಗೆ ಹೆಲಿಕಾಪ್ಟರಲ್ಲಿ ಡ್ರಾಪ್ ಕೊಟ್ಟ ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani Photo

ಬೆಳಗಾವಿ: ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಜಿಲ್ಲೆಯ ಗೋಕಾಕಕ್ಕೆ ಹೆಲಿಕಾಪ್ಟರ್‌ನಲ್ಲಿ ಬುಧವಾರ ಡ್ರಾಪ್ ನೀಡಿದ್ದಾರೆ.

ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಿದ್ದ ಅವರು ಬೆಂಗಳೂರಿಗೆ ತೆರಳುತ್ತಿದ್ದರು. ತಮ್ಮೊಂದಿಗೆ ಸತೀಶ ಜಾರಕಿಹೊಳಿ ಅವರನ್ನೂ ಕರೆದುಕೊಂಡು ಬಂದಿದ್ದರು. ಹೆಲಿಕಾಪ್ಟರ್‌‌ಅನ್ನು ಗೋಕಾಕದ ಡಾಲರ್ಸ್‌ ಕಾಲೊನಿಯ ಹೆಲಿಪ್ಯಾಡ್‌ನಲ್ಲಿ ಲ್ಯಾಂಡ್ ಮಾಡಿಸಿ ಇಳಿಸಿ ಹೋಗಿದ್ದಾರೆ. ಕೆಲವೇ ನಿಮಿಷಗಳಲ್ಲಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಮುಂದುವರಿಸಿದ್ದಾರೆ.

ಸತೀಶ ಬೆಂಬಲಿಗರು ಮಾಡಿರುವ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು