ಮಂಗಳವಾರ, ಮಾರ್ಚ್ 21, 2023
29 °C

ಸಿದ್ದರಾಮಯ್ಯ ಹೇಳಿಕೆ ಹಿಂಪಡೆಯಲಿ: ಪೂಜಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ವೀರ್ ಸಾವರ್ಕರ್ ಕುರಿತು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಕೂಡಲೇ ತಮ್ಮ ಹೇಳಿಕೆ ವಾಪಸ್ ಪಡೆಯಬೇಕು’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದರು.

ಇಲ್ಲಿ ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಾವರ್ಕರ್ ಬಗ್ಗೆ ಮಾಜಿ ಪ್ರಧಾನಿ ದಿ‌.ಇಂದಿರಾ ಗಾಂಧಿ ಅವರೇ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳುತ್ತದೆ. ಅನುಭವಿಯಾದ ಸಿದ್ದರಾಮಯ್ಯ ಇತಿಹಾಸ ತಿಳಿದುಕೊಳ್ಳಬೇಕು’ ಎಂದರು.

‘ಅವರ ಹೇಳಿಕೆಯಿಂದ ಇಡೀ ದೇಶಕ್ಕೆ ನೋವಾಗಿದೆ. ಹೀಗಾಗಿ ಹೇಳಿಕೆ ವಾಪಸ್ ಪಡೆದರೆ ಗೌರವ ಹೆಚ್ಚಾಗುತ್ತದೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು