ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ₹ 75.29 ಕೋಟಿ ವೆಚ್ಚದ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿಗೆ ಚಾಲನೆ

Last Updated 25 ಫೆಬ್ರುವರಿ 2019, 9:11 IST
ಅಕ್ಷರ ಗಾತ್ರ

ನಂದಗಡ (ಬೆಳಗಾವಿ ಜಿಲ್ಲೆ): ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದರು.

₹ 75.29 ಕೋಟಿ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ (ವೀರಭೂಮಿ), 18 ಕೋಟಿ ವೆಚ್ಚದಲ್ಲಿ ಯಾತ್ರಿನಿವಾಸ ಹಾಗೂ ₹ 3.06 ಕೋಟಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ.

ಸಚಿವರಾದ ಪುಟ್ಟರಂಗಶೆಟ್ಟಿ, ಆರ್.ವಿ. ದೇಶಪಾಂಡೆ, ಸಿ.ಎಸ್. ಶಿವಳ್ಳಿ, ಸಂಸದೀಯ ಕಾರ್ಯದರ್ಶಿಗಳಾದ ಡಾ.ಅಂಜಲಿ ನಿಂಬಾಳ್ಕರ್, ಮಹಾಂತೇಶ ಕೌಜಲಗಿ, ಶಾಸಕ ಭೈರತಿ ಬಸವರಾಜ್, ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT