ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜನರ ಕಲ್ಯಾಣಕ್ಕಾಗಿ ಶ್ರಮಿಸಿದ್ದ ಸಿದ್ಧರಾಮೇಶ್ವರರು’

Published 16 ಜನವರಿ 2024, 15:54 IST
Last Updated 16 ಜನವರಿ 2024, 15:54 IST
ಅಕ್ಷರ ಗಾತ್ರ

ಬೆಳಗಾವಿ: ‘ಶಿವಯೋಗಿ ಸಿದ್ಧರಾಮೇಶ್ವರರು ಕಾಯಕ ಯೋಗಿಯಾಗಿಯೂ ಗುರುತಿಸಿಕೊಂಡಿದ್ದರು. ಸಮಾಜದ ಒಳಿತಿಗಾಗಿ ದಣಿವರಿಯದೆ ದುಡಿದಿದ್ದರು’ ಎಂದು ಸಾಹಿತಿ ಸುಬ್ಬರಾವ್‌ ಎಂಟೆತ್ತಿನವರ ಹೇಳಿದರು.

ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಮಂಗಳವಾರ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

‘12ನೇ ಶತಮಾನದಲ್ಲಿ ಸಿದ್ಧರಾಮೇಶ್ವರರು ಜನರ ಅನುಕೂಲಕ್ಕಾಗಿ ಕೆರೆ–ಕಟ್ಟೆಗಳನ್ನು ನಿರ್ಮಿಸಿದ್ದರು. ತಮ್ಮ ಜೀವವನ್ನೇ ಜನರ ಸೇವೆಗಾಗಿ ಮುಡಿಪಾಗಿಟ್ಟಿದ್ದರು. ಹಳ್ಳಿಗಳ ಉದ್ಧಾರಕ್ಕಾಗಿ ಶ್ರಮಿಸಿದ್ದರು’ ಎಂದು ಸ್ಮರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ವೇಣುಗೋಪಾಲ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಮುಖಂಡರಾದ ಎಲ್.ಜಿ. ಗಾಡಿವಡ್ಡರ, ಕೆ.ಎಸ್.ಮಮದಾಪುರ, ಪರಶುರಾಮ ಕಲಘಟಗಿ, ಆರ್.ಬಿ.ಬಂಡಿವಡ್ಡರ, ಶಿವಾಜಿ ವಡ್ಡರ, ಚೌಡಪ್ಪ ವಡ್ಡರ, ಶಿವಾಜಿ ಹಿಂಡಲಗೇಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT