ಶುಕ್ರವಾರ, ಆಗಸ್ಟ್ 19, 2022
22 °C

ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು.

ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು.

ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ಯುವಪೀಳಿಗೆ ದುಶ್ಚಟಕ್ಕೆ ಬಲಿಯಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ಆನಂದ ಹೊಸೂರ, ರೋಹಿತ ಉಮನಾಬಾದಿಮಠ, ಕಿರಣ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.