ಬೆಳಗಾವಿ: ‘ಇಲ್ಲಿನ ಮಹಾನಗರ ಪಾಲಿಕೆ ಕಚೇರಿಯಲ್ಲಿ ಇ–ಆಸ್ತಿ ಪ್ರಮಾಣಪತ್ರ ವಿತರಣೆ ಪ್ರಕ್ರಿಯೆ ಸರಳೀಕರಣಗೊಳಿಸಬೇಕು. ಹಲವು ದಾಖಲೆ ಕೇಳಿ ಅಲೆದಾಡಿಸಬಾರದು’ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಪಾಟೀಲ ಒತ್ತಾಯಿಸಿದರು.

ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೂರ್ನಾಲ್ಕು ದಾಖಲೆ ಪಡೆದು, ಎರಡ್ಮೂರು ದಿನಗಳಲ್ಲೇ ಇ–ಆಸ್ತಿ ಪ್ರಮಾಣಪತ್ರ ವಿತರಿಸಲಾಗುತ್ತಿದೆ. ಆದರೆ, ಬೆಳಗಾವಿ ಪಾಲಿಕೆಯಲ್ಲಿ 8ರಿಂದ 10 ದಾಖಲೆ ದಾಖಲೆ ಕೇಳಿ ವಿಳಂಬ ಮಾಡಲಾಗುತ್ತಿದೆ’ ಎಂದು ದೂರಿದರು.

‘ಬೆಳಗಾವಿ ಪಾಲಿಕೆ ವ್ಯಾಪ್ತಿಯಲ್ಲಿ 2.50 ಲಕ್ಷಕ್ಕೂ ಅಧಿಕ ಆಸ್ತಿಗಳಿವೆ. ಈ ಪೈಕಿ ಈವರೆಗೆ 15 ಸಾವಿರ ಆಸ್ತಿಗಳ ಮಾಲೀಕರಿಗೆ ಇ–ಆಸ್ತಿ ಪ್ರಮಾಣಪತ್ರ ವಿತರಿಸಲಾಗಿದೆ. ತೆರಿಗೆ ಭರಿಸಿದ ರಸೀದಿ, ಸಿಟಿಎಸ್ ಸಂಖ್ಯೆ ಸೇರಿ ಕೆಲವೇ ದಾಖಲೆ ಪರಿಶೀಲಿಸಿ ಪ್ರಮಾಣಪತ್ರ ಕೊಡಬೇಕು’ ಎಂದು ಒತ್ತಾಯಿಸಿದರು.

‘ಸದ್ಯ ಕೆಲವರಿಗೆ ನಾಲ್ಕೇ ದಿನಗಳಲ್ಲಿ ಪ್ರಮಾಣಪತ್ರ ಸಿಕ್ಕರೆ, ಇನ್ನೂ ಕೆಲವರಿಗೆ ತಿಂಗಳಾದರೂ ಸಿಕ್ಕಿಲ್ಲ. ಪ್ರಕ್ರಿಯೆ ಚುರುಕುಗೊಳಿಸುವ ಜತೆಗೆ, ಏಜೆಂಟರ ಹಾವಳಿ ತಪ್ಪಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.