ಶನಿವಾರ, ಅಕ್ಟೋಬರ್ 24, 2020
18 °C

ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ಬೇರೆ ಯಾರಿಂದಲೂ ದೊರೆತಿಲ್ಲ: ಎಸ್‌ಪಿಬಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಕನ್ನಡಿಗರು ನೀಡಿದ ಪ್ರೀತಿ, ವಾತ್ಸಲ್ಯ ಬೇರೆ ಯಾರಿಂದಲೂ ದೊರೆತಿಲ್ಲ. ಮುಂದಿನ ಜನ್ಮದಲ್ಲಿ ನಾನು ಕನ್ನಡ ನಾಡಲ್ಲಿ ಹುಟ್ಟಲು ಬಯಸುತ್ತೇನೆ’  ಎಂದು ಖ್ಯಾತ ಹಿನ್ನಲೆ ಗಾಯಕ, ಪದ್ಮಭೂಷಣ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಹೇಳಿದ್ದರು.

ಇದೇ ವರ್ಷದ ಫೆ.1ರಂದು ಜಿಲ್ಲೆಯ ಗೋಕಾಕದಲ್ಲಿ ಇಲ್ಲಿನ ಶೂನ್ಯ ಸಂಪಾದನ ಮಠದ ಕಾಯಕ ಯೋಗಿ ಲಿಂ.ಬಸವ ಸ್ವಾಮೀಜಿ ಅವರ 15ನೇ ಪುಣ್ಯಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವ-2020 ಸಮಾರಂಭದಲ್ಲಿ ಶ್ರೀಮಠದ ವತಿಯಿಂದ ನೀಡಲಾದ ₹ 1 ಲಕ್ಷ ನಗದು ಒಳಗೊಂಡಿರುವ ‘ಕಾಯಕಶ್ರೀ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದ್ದರು.

‘ವಿದ್ಯಾರ್ಥಿ ಜೀವನದಲ್ಲಿದ್ದಾಗ, ಎಂಜಿನಿಯರ್‌ ಆಗಬೇಕೆಂಬ ಆಸೆ ಇತ್ತು. ಆದರೆ, ವಿಧಿ ನನ್ನನ್ನು ಗಾಯಕನನ್ನಾಗಿ ಬೆಳೆಸಿದೆ. ಭಾರತದಲ್ಲಿ ಇರುವ 15 ಭಾಷೆಗಳಲ್ಲಿ ಹಾಡುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಬೇರೆಯವರಿಗೂ ಈ ವಿದ್ಯೆ ನೀಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಆಂಧ್ರದಲ್ಲಿ ಹುಟ್ಟಿ ಬೆಳೆದರೂ ಹಿನ್ನೆಲೆ ಗಾಯಕನಾಗಿ ಹಾಡಿದ 2ನೇ ಹಾಡೇ ಕನ್ನಡದ್ದು. ಅಲ್ಲಿಂದ ಪ್ರಾರಂಭವಾದ ಈ ಪಯಣ ಇಲ್ಲಿವರೆಗೆ ಬಂದಿದೆ. ಕನ್ನಡಿಗರ ಪ್ರೀತಿ ಮರೆಯಲು ಸಾಧ್ಯವಿಲ್ಲ’ ಎಂದು ಮನದುಂಬಿ ನೆನೆದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು