ಬುಧವಾರ, ಆಗಸ್ಟ್ 10, 2022
21 °C

ಬೆಳಗಾವಿ: ನೇಣು ಬಿಗಿದುಕೊಂಡು ಅಕ್ಕ, ತಮ್ಮ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಶಹಾಪುರದ ಆಚಾರಿ ಗಲ್ಲಿಯಲ್ಲಿ ಅಕ್ಕ ಹಾಗೂ ತಮ್ಮ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಪಂಕಜಾ ನಾಯಿಕ (70) ಹಾಗೂ ಯದುಕುಲೇಶ ನಾಯಿಕ (61) ಎಂದು ಗುರುತಿಸಲಾಗಿದೆ.

‘ಮನೆಯಲ್ಲಿ ಅವರಿಬ್ಬರೇ ಇರುತ್ತಿದ್ದರು. ಘಟನೆ ಯಾವಾಗ ನಡೆದಿದೆ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದಿದ್ದರಿಂದ ಅಕ್ಕಪಕ್ಕದ ಮನೆಯವರು ಗುರುವಾರ ಮಾಹಿತಿ ನೀಡಿದ್ದರು. ಬಂದು ಪರಿಶೀಲಿಸಿದಾಗ ಮೃತದೇಹಗಳು ಪತ್ತೆಯಾದವು’ ಎಂದು ಪೊಲೀಸರು ಮಾಹಿತಿ ನೀಡಿದರು.

ಶಹಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು